NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ ನೌಕರರ ಬಾಕಿ 2ತಿಂಗಳ ಅರ್ಧ ವೇತನಕ್ಕಾಗಿ ಸರ್ಕಾರದಿಂದ 94.64 ಕೋಟಿ ರೂ. ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಎಂಟಿಸಿ ನೌಕರರಿಗೆ ಡಿಸೆಂಬರ್‌ ಮತ್ತು ಜನವರಿ ತಿಂಗಳುಗಳಲ್ಲಿ ಉಳಿಸಿಕೊಂಡಿದ್ದ ಅರ್ಧ ವೇತನ ನೀಡಲು ಸರ್ಕಾರ 94.64 ಕೋಟಿ ರೂ. ಬಿಡುಗಡೆ ಮಾಡಿದೆ.

ಈ ಕುರಿತು “ವಿಜಯಪಥ”ದೊಂದಿಗೆ ಮಾತನಾಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಅವರು, ಸರ್ಕಾರ ಹಣ ಬಿಡುಗಡೆ ಮಾಡಿದ್ದು, ನೌಕರರ ಬ್ಯಾಂಕ್‌ ಖಾತೆಗಳಿಗೂ ಹಾಕಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಡಿಸೆಂಬರ್‌ ಮತ್ತು ಜನವರಿಯಲ್ಲಿ ಬಿಎಂಟಿಸಿ ನೌಕರರಿಗೆ ಅರ್ಧವೇತನ ನೀಡಿದ್ದು ಉಳಿದ ಅರ್ಧವೇತನವನ್ನು ಶೀಘ್ರದಲ್ಲೇ ಕೊಡಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕೂಡ ತಿಳಿಸಿದ್ದರು. ಅದರಂತೆ ಸರ್ಕಾರ ಹಣ ಬಿಡುಗಡೆ ಮಾಡಿದೆ.

ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಉಂಟಾದ ಸಂಕಷ್ಟದಿಂದಾಗಿ ತನ್ನ ನೌಕರರ ಡಿಸೆಂಬರ್​ ಮತ್ತು ಜನವರಿ ತಿಂಗಳ ವೇತನದಲ್ಲಿ ಅರ್ಧ ಸಂಬಳವನ್ನು ಮಾತ್ರ ನೀಡಲಾಗಿತ್ತು. ಇನ್ನರ್ಧ ನೀಡಲಾಗಿರಲಿಲ್ಲ.

ಈ ಸಂಬಂಧ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ನೌಕರರ ವೇತನಕ್ಕಾಗಿ 94.64 ಕೋಟಿ ರೂಪಾಯಿ ಮಂಜೂರು ಮಾಡುವಂತೆ ಕೋರಲಾಗಿತ್ತು.

ಕೊರೊನಾ ಲಾಕ್​ ಡೌನ್​ ಉಂಟು ಮಾಡಿದ ಆರ್ಥಿಕ ಸಮಸ್ಯೆಯಿಂದ ಇನ್ನು ಹೊರಬಾರದ ಬಿಎಂಟಿಸಿಯ ಸ್ಥಿತಿಯನ್ನು ಗಮನಿಸಿದ ಸರ್ಕಾರ ನೌಕರರ ನೆರವಿಗೆ ಧಾವಿಸಿದೆ. ಅದಕ್ಕಾಗಿಯೇ ಸದ್ಯ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರ ಮಂಜೂರು ಮಾಡಿರುವ ಹಣದಿಂದಲೇ ಸಿಬ್ಬಂದಿಗೆ ಉಳಿದ ಸಂಬಳವನ್ನು ನೀಡಲಾಗುತ್ತದೆ ಎಂದು ಶಿಖಾ ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ