ಜೇವರ್ಗಿ: ಜೇವರ್ಗಿಯಿಂದ ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅಡಿಯಲ್ಲಿ ಬರುವ ಹರವಾಳ ಟೋಲ್ ಗೇಟನಲ್ಲಿ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ದರ ವಿಧಿಸಲಾಗುತ್ತಿದೆ.ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರ ನಮಗೆ ಇನ್ನೊಂದು ಅವಕಾಶ ನೀಡಬೇಕು. ಸ್ಥಳೀಯರಿಗೆ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಶಿವಲಿಂಗ ಹಳ್ಳಿ ಆಗ್ರಹಿಸಿದ್ದಾರೆ.