NEWSನಮ್ಮಜಿಲ್ಲೆರಾಜಕೀಯ

ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುಬ್ಯಾಡ ಪದಗ್ರಹಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ  ಶಿವಪ್ಪ ಶಿವಲಿಂಗಪ್ಪ ಗುಬ್ಯಾಡ ಬುಧವಾರ ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು ಸೊನ್ನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ, ಕುಡಿಯುವ ನೀರು, ಪ್ರತಿಯೊಬ್ಬರಿಗೂ ವಿದ್ಯುತ್‌ ಮತ್ತು ಮನೆ ಇಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದರು.

ಈ ಹಿಂದಿನಿಂದಲೂ ನನಗೆ ಗ್ರಾಮಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲವಿತ್ತು. ಹೀಗಾಗಿ ಗ್ರಾಮಸ್ಥರ ಬೆಂಬಲದಿಂದ ಸದಸ್ಯನಾಗಿ ಆಯ್ಕೆಯಾದೆ. ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನನ್ನ ಅಧಿಕಾರವಧಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಒಳ್ಳೆ ಕೆಲಸ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಇನ್ನು ಸರ್ಕಾರದಿಂದ ಪಂಚಾಯಿತಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮವನ್ನು ಅಭಿವೃದ್ಧಿ ಮಾಡುವ ಗುರಿ ಇದೆ. ನನ್ನ ಅಧಿಕಾರ ಅವಧಿಯಲ್ಲಿ ಹೊಸ ಬದಲಾವಣೆ ತರಬೇಕು ಎಂಬ ಹಂಬಲವಿದೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಸದಸ್ಯ ಶಿವಾನಂದ ಮಾಕಾ, ವಿಎಸ್ಎಸ್ಎನ್ ಅಧ್ಯಕ್ಷ ವಿಜಯಕುಮಾರ ಬಿರಾದಾರ, ಜೇವರ್ಗಿ ತಾಲೂಕಿನ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಹಳ್ಳೆಪ್ಪಾಚಾರಿ ಜೋಶಿ, ಗ್ರಾಮ ಪಂಚಾಯಿತಿ ಸದಸ್ಯರಾದ ವೀರಭದ್ರಯ್ಯ ಹಿರೇಮಠ, ಬಾಬು ಮಾಂಗ, ಲಕ್ಷ್ಮಿ ಯಲ್ಲಪ್ಪ ಮತ್ತು ಗ್ರಾಮದ ಶರಣು, ಮಹೇಶ್ ಮಹಾಜನಶೆಟ್ಟಿ, ಶಿವಲಿಂಗಪ್ಪ ಮುಧೋಳ ಇತರರು ಇದ್ದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ