NEWSನಮ್ಮಜಿಲ್ಲೆನಮ್ಮರಾಜ್ಯವಿಜ್ಞಾನ

ಇಂಧನ ಉಳಿಸಿದ ಚಾಲಕರಿಗೆ 10 ಗ್ರಾಂ ಚಿನ್ನದ ಪದಕ: ಸಚಿವ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಕೋವಿಡ್‌ -19 ಸಂಕಷ್ಟದ ನಡುವೆಯೂ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಎನ್‌ಇಕೆಎಸ್‌ಆರ್‌ಟಿಸಿ) ಚಾಲಕರು ಮತ್ತು ಅಧಿಕಾರಿಗಳ ಶ್ರಮದಿಂದ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಿನ ಸಾರಿಗೆ ಆದಾಯ ಬಂದಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಶ್ಲಾಘಿಸಿದ್ದಾರೆ.

ಗ್ರಾಮೀಣ ಭಾಗದ ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಂಸ್ಥೆ ವತಿಯಿಂದ ತಯಾರಿಸಿದ ಸಂಚಾರಿ ಗ್ರಂಥಾಲಯ ವಾಹನವನ್ನು ಗುರುವಾರ ವೀಕ್ಷಿಸಿ ಮಾತನಾಡಿದರು.

ಚಾಲಕರು ಇಂಧನವನ್ನು ಉಳಿಸಲು ಶ್ರಮಿಸಿದರೆ ಇಂಧನ ವೆಚ್ಚವನ್ನು ಕಡಿಮೆ ಮಾಡಬಹುದು. ಇದರಿಂದ ಆದಾಯ ವೃದ್ಧಿಯಾಗಲಿದೆ ಎಂದು ಹೇಳಿದರು.

ಸ್ವಂತ ಹಣದಿಂದ ಚಿನ್ನದ ಪದಕ
ಪ್ರಸಕ್ತ ವರ್ಷ ಅಂದರೆ ಏಪ್ರಿಲ್ -2020 ರಿಂದ ಮಾರ್ಚ್‌-2021 ರವರೆಗೆ ನಾಲ್ಕು ಸಾರಿಗೆ ಸಂಸ್ಥೆಗಳ ತಲಾ ಒಬ್ಬರಿಗೆ ಅಂದರೆ ಇಂಧನ ಹೆಚ್ಚಾಗಿ ಉಳಿತಾಯ ಮಾಡಿದ ಚಾಲಕರಿಗೆ ತಲಾ 10 ಗ್ರಾಂ ಚಿನ್ನದ ಪದಕವನ್ನು ತಮ್ಮ ಸ್ವಂತ ಹಣದಿಂದ ನೀಡಲಾಗುವುದು ಎಂದು ಘೋಷಿಸಿದರು.

ಚಾಲನಾ ಸಿಬ್ಬಂದಿಯನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಈ ಚಿನ್ನದ ಪದಕ ನೀಡಲಾಗುತ್ತಿದ್ದು, ಈ ವಿತರಣಾ ಕಾರ್ಯಕ್ರಮವನ್ನು ಏಪ್ರಿಲ್‌ನಲ್ಲಿ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಚಾರಿ ಗ್ರಂಥಾಲಯವನ್ನು ಒದಗಿಸುವುದರಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಚಾರಿ ಗ್ರಂಥಾಲಯಗಳನ್ನು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರಾದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಕಲುಬುರುಗಿ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ  ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್‌ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು