NEWSನಮ್ಮಜಿಲ್ಲೆನಮ್ಮರಾಜ್ಯ

ಕೊಡಗು ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಡಿಕೇರಿ: ಕೊಡಗು ಜಿಲ್ಲೆಯ ಗಡಿಭಾಗ ಶನಿವಾರಸಂತೆ ಸುತ್ತಮುತ್ತ ಶುಕ್ರವಾರ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಅದರಲ್ಲೂ ಶನಿವಾರಸಂತೆ ಸಮೀಪದ ಹಳ್ಳಿಯಲ್ಲಿ ಭಾರಿ ಗಾತ್ರದ ಆಲಿಕಲ್ಲು ಸಹಿತ ಮಳೆಯಾಗಿದ್ದು ರಸ್ತೆ ಮೇಲೆ ಅರ್ಧ ಅಡಿಯಷ್ಟು ಆಲಿಕಲ್ಲುಗಳು ಬಿತ್ತಿದ್ದನ್ನು ನೂರಾರು ಗ್ರಾಮಸ್ಥರು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಸೆರೆಹಿಡಿದಿದ್ದಾರೆ.

ಇದು ಪ್ರಕೃತಿಯ ವಿಚಿತ್ರವೋ ಅಥವಾ ವಿಪರ್ಯಾಸವೋ ಗೊತ್ತಿಲ್ಲ. ಆದರೆ, ಈ ರೀತಿ ಮಳೆಯಾಗಿರುವುದರಿಂದ ರೈತರ ಬೆಳೆದಿರುವ ಫಸಲಿಗೆ ಹಾನಿಯಾಗಿರುವುದು ಖಚಿತ. ಇಂಥ ಮಳೆಯಾಗುವುದರಿಂದ ರೈತರ ಬದುಕು ಮೂರಾಬಟ್ಟೆಯಾಗುತ್ತದೆ. ಆದ್ದರಿಂದ ಸರ್ಕಾರ ಇತ್ತ ಕಣ್ಣುತೆರೆದು ನೋಡಬೇಕಾಗಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇನ್ನು ಈ ಕುರಿತು ಅನಿಸಿಕೆ ಹಂಚಿಕೊಂಡರು ಸ್ಥಳೀಯರು ತಾವು ಜೀವಮಾನದಲ್ಲೇ ಇಷ್ಟೊಂದು ಆಲಿಕಲ್ಲು ಬಿದ್ದಿದ್ದನ್ನು ನೋಡೇ ಇಲ್ಲ ಎಂದು ಆಶ್ಚರ್ಯ ಪಡಿಸಿದ್ದಾರೆ ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಂಡ ಮುಸಲಧಾರೆ ಒಂದೂವರೆ ಗಂಟೆಗಳು ಬಿದ್ದಿದ್ದು, ಇದು ಪ್ರಕೃತಿಯ ಮುನಿಸು ಇರಬಹುದು ಎಂದು ಹೇಳಲಾಗುತ್ತಿದೆ.

ಸುಮಾರು ಒಂದೂವರೆ ಇಂಚಿನಷ್ಟು ಮಳೆ ಸುರಿದಿದ್ದು ಇದರಿಂದ ಕಾಳುಮೆಣಸು ಬೆಳೆಗೆ ಹಾನಿಯಾಗಿದೆ ಎಂದು ರೈತ ಮಧುಸೂದನ್‌ ಎಂಬುವರು ಹೇಳಿದ್ದಾರೆ. ಕಾಳುಮೆಣಸಿಗೆ ಈಗ ಕೊಯ್ಲಿನ ಸಮಯ. ಬಳಿಯಲ್ಲಿದ್ದ ಮೆಣಸು ಕೆಳಕ್ಕೆ ಬಿದ್ದಿದೆ. ಈಗಲೇ ಕಾಳುಮೆಣಸಿಗೂ ಬೆಲೆ ಕುಸಿದಿದ್ದು, 1ಕೆಜಿಗೆ 330 ರೂ.ಗಳಿದೆ. ಈ ಸಂದರ್ಭದಲ್ಲಿ ಬೆಳೆ ಹಾನಿಯಾದರೆ ರೈತರ ಬದುಕು ಕಷ್ಟ ಎಂದು ಹೇಳಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆಮೇಲೆ, ಮನೆಗಳ ಸುತ್ತಮುತ್ತ ಬಿದ್ದಿರುವ ಭಾರಿ ಪ್ರಮಾಣದ ಆಲಿಕಲ್ಲುಗಳ ದೃಶ್ಯ ವೈರಲ್ ಆಗಿದೆ.

ಬೆಂಗಳೂರಿನಲ್ಲೂ ಮಳೆ
ಇನ್ನು ಸಂಜೆ ಸುಮಾರು 5.45ರಲ್ಲಿ ಬೆಂಗಳೂರಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಮಂಡ್ಯ, ಮೈಸೂರು, ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಈ ಮಳೆಯಿಂದ ಲಾಭಕ್ಕಿಂತ ಲಾಸ್‌ ಹೆಚ್ಚು ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು