ವಿಜಯಪಥ ಸಮಗ್ರ ಸುದ್ದಿ
ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತದ ನಡೆದಿದ್ದು ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಯಲ್ಲಿ ಕಾರ್ಮಿಕರ ಶವಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಇನ್ನು ಈ ದುರಂತದಿಂದ ಮೂವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಸ್ಥಳ ಪರಿಶೀಲಿಸಿದ್ದಾರೆ.
ಮೂಲಗಳ ಪ್ರಕಾರ, ಭ್ರಮರಾವಾಸಿನಿ ಕ್ರೂಷರ್‌ನಿಂದ ಸುಮಾರು ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಮೃತರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಗಂಗಾಧರ್, ವೇಯರ್ ಮುರಳಿ ಮತ್ತು ವಾಚ್‌ಮನ್ ಮಹೇಶ್ ಸೇರಿದಂತೆ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.
ಮೃತರು ಟಾಟಾ ಏಸ್ ಮತ್ತು ಒಂದು ಬೈಕ್ ಮೂಲಕ ಬ್ರಮರವಾಸಿನಿ ಕ್ರಷರ್‌ನಿಂದ ಒಂದು ಕಿಲೋಮೀಟರ್ ದೂರದ ಅರಣ್ಯಕ್ಕೆ ತೆರಳಿ, ಅಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಮತ್ತು ಎಲೆಕ್ಟ್ರಿಕ್ ಡಿಟೋನೇಟರ್‌ಗಳನ್ನು ತರುತ್ತಿದ್ದರು. ಆ ವೇಳೆ ಏಕಾಏಕಿ ಸ್ಫೋಟವಾಗಿದ್ದು, ಪರಿಣಾಮ ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಶವಗಳು ಛಿದ್ರವಾಗಿದ್ದು ನೂರಾರು ಮೀಟರ್‌ಗಳ ವ್ಯಾಪ್ತಿಯಲ್ಲಿ ದೇಹದ ತುಂಡುಗಳು ಅಲ್ಲಲ್ಲಿ ಬಿದ್ದಿವೆ.
Pictures from #dynamiteblast site near #chikkaballapur. Illegal quarries definitely needs to be stopped. @BSBommai @CMofKarnataka @XpressBengaluru @santwana99 @NammaBengaluroo @mla_sudhakar @ChikkballapurZP pic.twitter.com/0Z6XQ947Cj
— Chetana Belagere (@chetanabelagere) February 23, 2021