NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸಲು ಸಿಎಂ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭಿತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಸರ್ಕಾರದ ನೌಕರರ ವಿರುದ್ಧದ ಅನಾಮಧೇಯ ದೂರುಗಳು ಹೆಚ್ಚಾದ ಕಾರಣ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಈ ಬಗ್ಗೆ ಸಿಎಂ ಪತ್ರ ಬರೆದಿದ್ದಾರೆ.

ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಅರ್ಜಿದಾರಿಂದ ದೂರುದಾರರ ಅಗತ್ಯ ದಾಖಲೆಗಳನ್ನು ಒದಗಿಸಿದ ಬಳಿಕ ಆರೋಪ ಮೇಲ್ನೋಟಕ್ಕೆ ಸರಿಯೆಂದು ಕಂಡು ಬಂದರೆ ಮಾತ್ರ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವುದಾಗಿ ಆದೇಶ ಹೊರಡಿಸುವಂತೆ ಮುಖ್ಯಕಾರ್ಯದರ್ಶಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ 2019ರಲ್ಲಿ ಕರ್ನಾಟಕ ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸಲು ಹೊರಡಿಸಿದ್ದ ಸುತ್ತೋಲೆಯನ್ನು ಅನೇಕರು ದುರುಪಯೋಗಪಡಿಸಿಕೊಂಡು, ಹೆಸರು ಮತ್ತು ವಿಳಾಸವನ್ನು ಬಳಸಿಕೊಂಡು ಬೇನಾಮಿ ದೂರುಗಳನ್ನು ನೀಡುತ್ತಿದ್ದಾರೆ. ಇದರಿಂದ ಅನಗತ್ಯವಾಗಿ ವಿಚಾರಣೆಗೆ ಒಳಪಡಿಸುವುದರಿಂದ ಅಧಿಕಾರಿ, ನೌಕರರಿಗೆ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗಿ ಹಾಗೂ ಪ್ರಾಮಾಣಿಕ ನೌಕರರಿಗೆ ತೊಂದರೆಯಾಗುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

ಈ ರೀತಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಉದ್ಭವವಾಗಿ ಸರಕಾರಿ ಕೆಲಸಕಾರ್ಯಗಳು, ಯೋಜನೆಗಳು ಕುಂಠಿತವಾಗುತ್ತಿವೆ. ಇದನ್ನು ತಪ್ಪಿಸಿ ಮತ್ತು ನಿರ್ಭೀತಿಯಿಂದ ಅಧಿಕಾರಿ ನೌಕರರು ಕರ್ತವ್ಯ ನಿರ್ವಹಿಸಲು ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು