NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯವಿಜ್ಞಾನ

ಮಂಗಳೂರಿನಲ್ಲಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಿಸಲು ಕ್ರಮ: ಡಿಸಿಎಂ ಅಶ್ವಥ್ ನಾರಾಯಣ

ಇನೋವೇಷನ್ ಕಾನ್‌ ಕ್ಲೇವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರ ಭರವಸೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಗಳೂರು: ಮಂಗಳೂರಿನಲ್ಲಿ ಐದು ಎಕರೆ ಜಾಗದಲ್ಲಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವ, ಉಪಮುಖ್ಯಮಂತ್ರಿ ಡಾ.ಸಿ. ಅಶ್ವಥ್ ನಾರಾಯಣ ಭರವಸೆ ನೀಡಿದರು.

ಬುಧವಾರ ಇಲ್ಲಿ ನಡೆದ ಇನೋವೇಷನ್ ಕಾನ್‌ ಕ್ಲೇವೆ ಉದ್ಘಾಟಿಸಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಿಂದ ಹೊರಗೆ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ದೊಡ್ಡ ಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಿದೆ.

ಅನೇಕ ವರ್ಷಗಳಿಂದ ತನ್ನಲ್ಲಿ ಅಡಗಿರುವ ಸಂಪನ್ಮೂಲಗಳಿಂದ ಬೆಂಗಳೂರು ನಗರವಾಗಿ ಸಹಜವಾಗಿಯೇ ಬೆಳೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಮಂಗಳೂರನ್ನು ಉದಯೋನ್ಮುಖ ತಂತ್ರಜ್ಞರಾಗಿ ಗುರುತಿಸಿ ಅದನ್ನು ವೇಗಗತಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.

ಉತ್ತಮ ಪರಿಸರ ಪ್ರವಾಸೋದ್ಯಮ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆ ಮುಂತಾದ ಪೂರಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಂಗಳೂರು ನಗರವನ್ನು ತಂತ್ರಜ್ಞಾನದ ಕೇಂದ್ರವಾಗಿ ರೂಪಿಸಲಾಗುವುದು.

ಹೀಗಾಗಿ ಮುಂದಿನ ದಿನಗಳಲ್ಲಿ ಉದ್ಯಮಗಳ ನೆಲೆಯಾಗುವುದು. ಜೊತೆಗೆ ನವೋದ್ಯಮ ಗಳ ತಾಣವಾಗಿಯೂ ಮಂಗಳೂರು ಹೊರಹೊಮ್ಮಲಿದೆ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ವಿವರಿಸಿದರು.

ಐಟಿ ಉದ್ಯಮದ ಜತೆಗೆ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಮತ್ತು ಅಭಿವೃದ್ಧಿ ನಿರ್ವಹಣೆ ಕ್ಷೇತ್ರದಲ್ಲೂ ಈ ನಗರವನ್ನು ಪ್ರಮುಖವಾಗಿ ನಾವು ಪರಿಗಣಿಸಿದ್ದೇವೆ.

ರಾಜ್ಯದ ಎಲೆಕ್ಟ್ರಾನಿಕ್ಸ್ ಐಟಿ-ಬಿಟಿ ವಿಜ್ಞಾನ-ತಂತ್ರಜ್ಞಾನ  ಆವಿಷ್ಕಾರಗಳನ್ನು ರಾಜ್ಯಾದ್ಯಂತ ಸ್ಥಾಪಿಸುತ್ತೇವೆ. ಈ ಪಟ್ಟಿಯಲ್ಲಿ ಮಂಗಳೂರು ಸೇರಿದಂತೆ ರಾಜ್ಯದ 5 ನಗರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಶಿವಮೊಗ್ಗ, ಬೆಳಗಾವಿ, ಮೈಸೂರು ಹಾಗೂ ಬೆಂಗಳೂರು ನಗರಗಳು ಇವೆ ವ್ಯವಸ್ಥೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತವೆ ಎಂದು ಹೇಳಿದರು.

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ. ಈ ಮೂಲಕ ನಮ್ಮ ರಾಜ್ಯದ ಹಾಗೂ ಮುಂದಿನ ಐದು ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಮಾಡುವ ಕಾರ್ಯಸೂಚಿ ಹೊಂದಿಗೆ ಅದು ಕೆಲಸಮಾಡುತ್ತಿದೆ. ಜತೆಗೆ ಕರ್ನಾಟಕದ ಐಟಿ ರಫ್ತು ವಹಿವಾಟು 150 ಬಿಲಿಯನ್ ಡಾಲರ್ ಹಾಕಿಕೊಳ್ಳಲಾಗಿದೆ ಎಂದು ವಿವರಿಸಿದರು.

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ದಾಪುಗಾಲು ಇಡುತ್ತಿದೆ ವಿಶ್ವಶಕ್ತಿಯಾಗಿ ಹೊರಹೊಮ್ಮುವ ಎಲ್ಲ ಸಾಮರ್ಥ್ಯವು ನಮ್ಮ ರಾಜ್ಯಕ್ಕಿದೆ ಎಂದರು.

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಬೆಂಗಳೂರು ಸಾಕಷ್ಟು ಅಭಿವೃದ್ಧಿಯಾಗಿದೆ. ಆದರೆ ಅಲ್ಲಿ ಮೂಲನಿವಾಸಿಗಳನ್ನು ಹುಡುಕಬೇಕಾಗಿದೆ. ಅಲ್ಲಿ ಅಪ್ಪಟ ಕನ್ನಡಿಗರನ್ನು ಬಿಟ್ಟು ಉಳಿದ ಎಲ್ಲರೂ ತುಂಬಿಹೋಗಿದ್ದಾರೆ. ಮಂಗಳೂರಿಗೆ ಇಂಥ ಪರಿಸ್ಥಿತಿ ಬರಬಾರದು. ಮಂಗಳೂರಿಗರನ್ನು ಉಳಿಸಿಕೊಂಡು ಮಂಗಳೂರು ಬೆಳೆಯಬೇಕು ಎಂದರು.

ರಾಜ್ಯ ಕರಾವಳಿಯ ಮಹತ್ವದ ನಗರವಾದ ಮಂಗಳೂರಿನಲ್ಲಿ ಹೆಚ್ಚೆಚ್ಚು ಉದ್ಯೋಗವಕಾಶ ಸೃಷ್ಟಿಯಾಗಬೇಕು. ಉದ್ಯಮಗಳು ಬರಬೇಕು. ಆರ್ಥಿಕ ಚಟುವಟಿಕೆಗಳು ಹೆಚ್ಚಾಗಬೇಕು. ಆದರೆ ಮಂಗಳೂರಿನ ಸಂಸ್ಕೃತಿ ಮತ್ತು ಪರಂಪರೆಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಬಾದು ಎಂದು  ಸಲಹೆ ನೀಡಿದರು.

ಇಲ್ಲಿನ ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳು, ಅಧಿಕಾರಿಗಳು ಹಾಗೂ ರಾಜಕೀಯ ನಾಯಕರನ್ನು ಒಳಗೊಂಡಂತೆ ಒಂದು ದೊಡ್ಡ ಚರ್ಚೆಯಾಗಲಿ ಮಂಗಳೂರಿನಲ್ಲಿ 2023ರ ಹೊತ್ತಿಗೆ   ವಾರ್ಷಿಕ 2,500 ಕೋಟಿ ರೂ. ಅಂದರೆ ಶೇ. 50ರಷ್ಟು ಅನುಕೂಲವಿದೆ ಎಂದು ಒಂದು ಸಮೀಕ್ಷೆ ಹೇಳಿದೆ.

ಮುಂದಿನ ದಿನಗಳಲ್ಲಿ ಮಂಗಳೂರಿಗೆ ಹೆಚ್ಚೆಚ್ಚು ಉದ್ಯಮಗಳು ಬರಲಿ. ಉದ್ಯಮಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅಲ್ಲಿ ಒಪ್ಪಿಗೆ ಗಳನ್ನು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಈ ನಗರ ಅವಕಾಶಗಳ ಹೆಬ್ಬಾಗಿಲು
ಮಂಗಳೂರಿನಲ್ಲಿ ತಮ್ಮ ವಿದ್ಯಾರ್ಥಿ ದಿನಗಳನ್ನು ಮೆಲುಕು ಹಾಕಿದ ಡಿಸಿಎಂ ಡಾ. ಅಶ್ವತ್ ನಾರಾಯಣ್ ಅವರು ನನ್ನ ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸಿದ ಜಾಗಗಳಲ್ಲಿ ಮಂಗಳೂರು ಕೂಡ ಒಂದು. ಇದರ ಋಣ ನನ್ನ ಮೇಲಿದೆ. ಅದೇರೀತಿ ನಗರವನ್ನು ಅಭಿವೃದ್ಧಿ ಗೊಳಿಸಬೇಕಾದ ಹೊಣೆಗಾರಿಕೆಯೂ ನನ್ನ ಮೇಲಿದೆ. ಇಲ್ಲಿ ಅವಕಾಶಗಳಿಗೆ ಅಂತ್ಯ ಎಂಬುದೇ ಇಲ್ಲ. ಈ ನಗರವು ಅವಕಾಶಗಳ ಹೆಬ್ಬಾಗಿಲು ಎಂದು ಹೇಳಿದರು.

ಕೋವಿಡ್ ನಿಯಮ ಪಾಲಿಸಿ
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಮತ್ತೆ ಹೆಚ್ಚಾಗಿರುವ ಕಾರಣ ಸರಕಾರ ನಿರ್ಬಂಧಗಳನ್ನು ವಿಧಿಸಿದೆ. ಇದು ಜನರ  ಒಳ್ಳೆಯದಕ್ಕೆ ಮಾಡಿದ ಕ್ರಮವಾಗಿದೆ. ಕೊರೊನಾ ಪರೀಕ್ಷೆ ಮಾಡಿಸಿಕೊಂಡ 72 ಗಂಟೆಗಳಲ್ಲಿ ರಾಜ್ಯವನ್ನು ಪ್ರವೇಶ ಮಾಡಿದರೆ ಅಭ್ಯಂತರ ಇಲ್ಲ. ಆದರೆ ಸಮಯ ಮೀರಿದರೆ ಮತ್ತೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಂಕಷ್ಟದ ಹೊತ್ತಿನಲ್ಲಿ ಎಲ್ಲರೂ ಸರಕಾರಕ್ಕೆ ಅಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಅಶ್ವಥ್ ನಾರಾಯಣ ಮನವಿ ಮಾಡಿದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಐಟಿ-ಬಿಟಿ ಇಲಾಖೆ  ಹೆಚ್ಚವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ ರಮಣ ರೆಡ್ಡಿ, ಸಿಸಿಐ ಅಧ್ಯಕ್ಷ ಸ್ಟೀವನ್ ಡೇವಿಡ್‌, ಕಿಯೋನಿಕ್ಸ್  ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌. ಸಿದ್ದರಾಮಪ್ಪ ಸಮಾವೇಶದಲ್ಲಿ ಭಾಗಿಯಾಗಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್