NEWSರಾಜಕೀಯವಿಜ್ಞಾನಸಂಸ್ಕೃತಿ

ನಂದಿಬೆಟ್ಟ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜನಪ್ರಿಯ ನಂದಿಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ನಂದಿಬೆಟ್ಟಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಣೀಯವಾಗಿದೆ. ಇದಕ್ಕೆ ಐತಿಹಾಸಿಕ ಧಾರ್ಮಿಕ ಪ್ರಾಮುಖ್ಯತೆ, ವಿಶೇಷವಾದ ಸಸ್ಯ ಸಂಪತ್ತು ಇದೆ. ಇವೆಲ್ಲವನ್ನು ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ನಂದಿ ಬೆಟ್ಟಕ್ಕೆ ರೋಪ್ ವೇ ಬೇಕು ಎಂಬ ಬೇಡಿಕೆ ಕಳೆದ 15 ವರ್ಷಗಳಿಂದ ಇದೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರಗಳಿಂದ ಯೋಜನೆ ಕೈಬಿಟ್ಟಿತ್ತು. ಈಗ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಹತ್ತು ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದು ತಿಳಿಸಿದರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿ ಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪಿಸಬೇಕಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿದೆ ಬೆಂಗಳೂರು ನಗರದಿಂದ ಒಂದು ಗಂಟೆಗೆ ಬರಬಹುದು. ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡಾ ಎಲ್ಲಾ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದು ಹೇಳಿದರು.

ಇದರ ಜೊತೆಗೆ eco-tourism, ಸುತ್ತಮುತ್ತಲಿನ ಐದು ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ-ಸುಂದರ ಸೇರಿದಂತೆ ವಿಶ್ವದ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದು ವಿವರಿಸಿದರು.

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ
ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಪ್ರವಾಸಿಗರು ನಂದಿಬೆಟ್ಟಕ್ಕೆ ಬರುವಾಗ ಪ್ಲಾಸ್ಟಿಕ್ ತರಬಾರದು ಎಂದು ಸಚಿವ ಸುಧಾಕರ್ ಮನವಿ ಮಾಡಿದರು.

ನಂದಿಬೆಟ್ಟಕ್ಕೆ ತೆರಳಿದ ಸಚಿವರು ಸ್ಥಳ ಪರಿಶೀಲನೆ ನಡೆಸಿದರು ಈ ವೇಳೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು