CrimeNEWSನಮ್ಮಜಿಲ್ಲೆ

ಕೋರ್ಟ್‌ ಆವರಣದಲ್ಲೇ ವಕೀಲ ಹನುಮಂತಪ್ಪನ ಕೊಚ್ಚಿ ಕೊಲೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹೊಸಪೇಟೆ: ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ವಕೀಲರೊಬ್ಬರನ್ನು ಹಾಡಹಲವೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸಪೇಟೆಯ ನ್ಯಾಯಾಲಯದ ಆವಣದಲ್ಲಿ ಇಂದು ನಡೆದಿದ್ದು ಜನರು ಭಯಭೀತರಾಗಿದ್ದಾರೆ.

ತಾಲೂಕಿನ ತಾರಿಹಳ್ಳಿ ಹನುಮಂತಪ್ಪ ಎಂಬ ವಕೀಲರೆ ಕೊಲೆಯಾದವರು. ಹನುಮಂತಪ್ಪ ಕುಟುಂಬದ ಸಂಬಂಧಿಕರ ಮಗನಿಂದಲೇ ಈ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ.

ಆದರೆ ಹತ್ಯೆ ಮಾಡಿವರ ಬಗ್ಗೆ ಇನ್ನು ನಿಖರವಾದ ಮಾಹಿತಿ ಸಿಕ್ಕಿಲ್ಲ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕಾಗಮಿಸಿ ಹತ್ಯೆಕೋರನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಕೋರ್ಟ್‌ ಆವರಣದಲ್ಲಿ ನಡೆಯುತ್ತಿದ್ದ ಕಾರ್ಯಮದಲ್ಲೇ ವಕೀಲ ತಾರಿಹಳ್ಳಿ ಹನುಮಂತಪ್ಪ ಅವರನ್ನು ಏಕಾಏಕಿ ಲಾಂಗ್‌ ಹಿಡಿದುಕೊಂಡ ಬಂದ ಯುವಕ ಯಾರು ಎಂದು ತಿರುಗಿ ನೋಡುವಷ್ಟರಲ್ಲಿ ಲಾಂಗ್‌ ಬೀಸಿ ಕುತ್ತಿಗೆ ಮತ್ತು ಮುಖವನ್ನು ಕೊಚ್ಚಿದ್ದಾನೆ. ಈ ವೇಳೆ ಭಯಭೀತರಾದ ಸ್ಥಳದಲ್ಲಿದ್ದ ಜನರು ಚಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ.

ಸಿನಿಮಾ ಶೈಲಿಯಲ್ಲಿ ಕ್ಷಣ ಮಾತ್ರದಲ್ಲಿ ವಕೀಲರನ್ನು ಕೊಚ್ಚಿ ಕೊಲೆಮಾಡಿದ ಆತ ಲಾಂಗನ್ನು ಸ್ಥಳದಲ್ಲೆ ಬಿಸಾಕಿ ಓಡಿಹೋಗಿದ್ದಾನೆ.

ಇನ್ನು ವಕೀಲರ ಹತ್ಯೆಯಾಗಿರುವ ವಿಷಯ ತಿಳಿದ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟುವಂತ್ತಿತ್ತು. ಬೆಳಗ್ಗೆ ತಾನೆ ಮನೆಯಿಂದ ಹೊರಡುವಾಗ ಬೇಗ ಮನೆಗೆ ಬರುತ್ತೇನೆ ಎಂದು ಹೇಳಿಹೋದ ಹನುಮಂತಪ್ಪ ಈಗ ಹೆಣವಾಗಿದ್ದಾನೆ ಎಂದು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

 

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು