Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ಸಾರಿಗೆ ಬಸ್‌ ಟಿಕೆಟ್‌ ದರ ಹೆಚ್ಚಳ ಪ್ರಸ್ತಾಪ ಇಲ್ಲ: ಸಚಿವ ಲಕ್ಷ್ಮಣ ಸವದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಿಜಯಪುರ: ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ. ಹೆಚ್ಚಳ ಮಾಡುವ ಪ್ರಸ್ತಾವನೆಯೂ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ಸೋಂಕಿನಿಂದ ಈಗಾಗಲೇ ಜನರು ತೊಂದರೆಗೀಡಾಗಿದ್ದಾರೆ. ಇನ್ನು ಕಳೆದ ವರ್ಷವೇ ಕೆಎಸ್‌ಆರ್‌ಟಿಸಿ, ಎನ್‌ಇಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಈ ಮೂರು ನಿಗಳಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಈ ಬಗ್ಗೆ ಸದಕ್ಕೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಮೊನ್ನೆ ಡೀಸೆಲ್‌ ದರ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡುವ ಬಗ್ಗೆ ನಿಗಮದ ಅಧಿಕಾರಿಗಳು ಪ್ರಸ್ತಾವನೆ ಕಳುಹಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿ ಬಳಿಕ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದರು.

ಗಾಣಿಗ ಸಮಾಜದ ಮೀಸಲಾತಿ ಹೋರಾಟದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅದರ ಬಗ್ಗೆ ಯೋಚನೆಯೂ ಇಲ್ಲ. ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಇದೆ. ಆದ್ದರಿಂದ ಮಲ್ಲಿನಾಥ ಸ್ವಾಮೀಜಿ ಇಂತಹ ಹೇಳಿಕೆಗಳನ್ನು ಕೊಡಬಾರದು, ಇದು ಸರಿಯಲ್ಲ ಎಂದು ಹೇಳಿದರು.

ಸಿಂದಗಿ ಮತಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವ ಪ್ರಶ್ನೆಯಿಲ್ಲ. ಸ್ಥಳೀಯರಲ್ಲಿ ಸೂಕ್ತರನ್ನು ಆರಿಸಿ ಗೆಲ್ಲಿಸಿ ತರುತ್ತೇನೆ. ಸುಖಾಸುಮ್ಮನೆ ಮಾಧ್ಯಮದವರು ನನ್ನ ಹೆಸರನ್ನು ಪ್ರಸ್ತಾಪಿಸಿ ಕಾಗೆ ಹಾರಿಸುತ್ತಿದ್ದಾರೆ ಎಂದು ಮುಂಬರುವ ಸಿಂದಗಿ ಉಪಚುನಾವಣೆಯಲ್ಲಿ ನಿಲ್ಲುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಇನ್ನು 18 ಗಂಟೆಯಲ್ಲಿ 24 ಕಿಮೀ ವಿಜಯಪುರ – ಸೊಲ್ಹಾಪುರ ರಸ್ತೆಯನ್ನು ನಿರ್ಮಾಣ ಮಾಡಿದ ಕಾರ್ಮಿಕರ ಸಾಧನೆಗೆ ಶುಭಾಶಯಗಳು. ಅಭೂತಪೂರ್ವ ರಸ್ತೆಗಳನ್ನು ನಿರ್ಮಾಣ ಮಾಡುತ್ತಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ರೋಡಕರಿ ಅಂತ ಜನರು ಕರೆಯುತ್ತಿದ್ದಾರೆ ಎಂದು ಹೇಳಿದರು.

Leave a Reply

error: Content is protected !!
LATEST
KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ