ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಗೈರಾದ ಶಾಸಕ ಜಿ.ಟಿ. ದೇವೇಗೌಡ ಹಾಗೂ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಕೆ.ಟಿ.ಚೆಲುವೇಗೌಡ ಜಿಲ್ಲಾ ಪಂಚಾಯಿತಿ ಸದಸ್ಯ ಬೀರಿಹುಂಡಿ ಬಸವಣ್ಣ, ಬೆಳವಾಡಿ ಶಿವಮೂರ್ತಿ ಸೇರಿದಂತೆ ಅನೇಕ ಮುಖಂಡರು ಒತ್ತಾಯಿಸಿದ್ದಾರೆ.
ಶನಿವಾರ ಜಂಟಿ ಸುದ್ದಿಗೋಷ್ಠಿ ನಡಿಸಿದ ಮುಖಂಡರು ಮಾತನಾಡಿ, ಒಂದು ವೇಳೆ ಇವರನ್ನು ಉಚ್ಚಾಟಿಸದೆ ಹೋದರೆ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ
ಮೇಯರ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜಿ.ಟಿ. ದೇವೇಗೌಡ ಶಾಮೀಲಾಗಿದ್ದಾರೆ. ಈಹಿದ್ದರು ಜೆಡಿಎಸ್ ಎಂದು ಹೇಳಿಕೊಳ್ಳುವುದಕ್ಕೆ ಇವರಿಗೇನು ಅನಿಸುವುದಿಲ್ಲವೆ. ಅದಿರಲಿ ಕೂಡಲೇ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿ ಕೊಳ್ಳಬೇಕು ಎಂದು ಚೆಲುವೇಗೌಡ ಸವಾಲೆಸೆದರು.
ಈ ಹಿಂದಿನಿಂದಲೂ ಜಿಟಿಡಿ ಅವರು ಪಕ್ಷಕ್ಕೆ ಧಕ್ಕೆಯಾಗುವ ರೀತಿಯಲ್ಲೇ ನಡೆದುಕೊಂಡು ಬರುತ್ತಿದ್ದಾರೆ. ಇನ್ನೊಂದೆಡೆ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರು ಕೂಡ ಪಕ್ಷ ಬಲವರ್ಧನೆ ವಿಷಯ ಸೇರಿ ಇತರೆ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಇನ್ನು ಇಂಥವರು ನಮ್ಮ ಪಕ್ಷಕ್ಕೆ ಬೇಕಾ ಎಂದು ಕಿಡಿಕಾರಿದರು.