ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ಐದನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಮಾ.13ರಂದು ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಕೆ. ಬಿರಾದಾರ ತಿಳಿಸಿದ್ದಾರೆ.
ಸಮ್ಮೇಳ ಆಯೋಜಿಸುವ ಕುರಿತು ಶನಿವಾರ ಸಂಜೆ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾಹಿತ್ಯ ಸಮ್ಮೇಳನ ಅಂಗವಾಗಿ ಮಾರ್ಚ್ 2ರಂದು ಹಿಮಾಲಯ ಯೋಗಿಗಳಾದ ಶ್ರೀ ನಿರಂಜನ ಮಹಾಸ್ವಾಮಿಗಳಿಂದ ಪ್ರವಚನ ಕಾರ್ಯಕ್ರಮ ಮತ್ತು ಉಚಿತ ಯೋಗ ಶಿಬಿರ ಜರುಗಲಿದೆ ಎಂದು ಮಾಹಿತಿ ನೀಡಿದರು.
ಇನ್ನು ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ನಾಗಣಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು. ಜತೆಗೆ ಸ್ವಾಗತ ಸಮಿತಿ ಅಧ್ಯಕ್ಷರಾಗಿ ತಾಲೂಕು ಆಹಾರ ಇಲಾಖೆಯ ಶಿರಸ್ತೇದಾರ ಮತ್ತು ರಾಜ್ಯ ಸರಕಾರಿ ನೌಕರ ಸಂಘದ ಅಧ್ಯಕ್ಷ ಡಿ.ಬಿ.ಪಾಟೀಲ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಶೋಕ ಸಾಹು ಗೋಗಿ, ಸೋಮಶೇಖರ ಗುಡೂರ, ಬಸವರಾಜ ಮದರಿ, ಸುಧೀಂದ್ರ ವಕೀಲ, ಬಗವಂತರಾಯ ಶಿವನ್ನವರ ಮತ್ತಿತರರು ಇದ್ದರು.