NEWSನಮ್ಮರಾಜ್ಯಶಿಕ್ಷಣ-

ಜೂನ್‌ 21ರಿಂದ ಜುಲೈ 5ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಸೋಮವಾರ ಪ್ರಕಟಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಾ, ಜೂನ್ 21ರಿಂದ ಜುಲೈ5ರ ವರೆಗೆ ಎಸ್ಸೆಸ್ಸೆಲ್ಸಿ ಬೋರ್ಡ್ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಜೂನ್ 21 ರಿಂದ ಆರಂಬವಾಗುವ ಪರೀಕೆಗಳು ಜುಲೈ 5ರವರೆಗೂ ನಡೆಯಲಿದ್ದು, ವಿಶೇಷವಾಗಿ ಕೋರ್‌ ವಿಷಯಗಳ ಪರೀಕ್ಷೆ ನಡೆಯಲಿದೆ. ಅಂದರೆ ಒಂದು ವಿಷಯದ ಪರೀಕ್ಷೆಗೂ ಮತ್ತೊಂದು ವಿಷಯದ ಪರೀಕ್ಷೆಗೂ ಒಂದು ದಿನದ ಅಂತರ ವಿರಲಿದೆ ಎಂದರು.

ಇನ್ನು ಜನವರಿ 28ರಂದು ಸುದ್ದಿಗೋಷ್ಠಿ ನಡೆಸಿದ್ದ ಸಚಿವರು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಆಕ್ಷೇಪ ಇದ್ದಲ್ಲಿ ಮನವಿ ಸಲ್ಲಿಕೆ ಮಾಡಬಹುದು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸೂಚಿಸಿದ್ದರು.

ಅಂದು ಜೂನ್ 14ರಿಂದ ಜೂನ್ 25ರ ವರೆಗೆ ಎಸ್ಸೆಸ್ಸೆಲ್ಸಿ ಬೋರ್ಡ್ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದರು. ಆದರೆ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಜೂನ್‌ 21ರಿಂದ ಜುಲೈ 5ರವರೆಗೆ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಯಾವ ದಿನ ಯಾವ ವಿಷಯದ ಪರೀಕ್ಷೆ
ಜೂನ್ 21ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂನ್ 24ರಂದು ಗಣಿತ, ಜೂನ್ 28 ರಂದು ವಿಜ್ಞಾನ, ಜೂನ್ 30 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ 2ರಂದು ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ ಹಾಗೂ ಜುಲೈ 5 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಶಿಕ್ಷಣ ಸ್ಪಂದನ
ಬೆಳಗಾವಿ ವಿಭಾಗದಲ್ಲಿ ಶಿಕ್ಷಣ‌ ಸ್ಪಂದನ ಕಡತ ವಿಲೇವಾರಿ‌ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ಅಭೂತಪೂರ್ವ ‌ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕಡತ ವಿಲೇವಾರಿಗೆ ಚುರುಕು‌ ಮುಟ್ಟಿಸುವ ಉದ್ದೇಶದಿಂದ ಬಜೆಟ್ ಅಧಿವೇಶನ‌ ಮುಗಿದ ಕೂಡಲೇ ಕಲ್ಯಾಣ ಕರ್ನಾಟಕ ಪ್ರದೇಶದ ಭಾಗದಿಂದ ಆರಂಭಿಸಿ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ನಡೆಸಲಾಗುವುದು ಎಂದರು.

ಬೆಳಗಾವಿ ವಿಭಾಗದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಶಿಕ್ಷಕರಿಂದ ಇಂದಿನ ಶಿಕ್ಷಣ ಸ್ಪಂದನ‌ಕ್ಕೆ ಒಟ್ಟು 2,940 ಅರ್ಜಿಗಳು ಬಂದಿದ್ದವು ಅವುಗಳಲ್ಲಿ 2,674 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ 266 ಅರ್ಜಿಗಳು ವಿವಿಧ ಹಂತಗಳಲ್ಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 90 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಅವುಗಳಲ್ಲಿ 41 ಅರ್ಜಿಗಳನ್ನು ವಿಲೇವಾರಿ‌ ಮಾಡಲಾಗಿದೆ ಎಂದು ತಿಳಿಸಿದರು.

ಮಧ್ಯಾಹ್ನದ ಬಿಸಿಯೂಟ ಯೋಜನೆ
ಗ್ರಾಮಾಂತರ ಪ್ರದೇಶಗಳಲ್ಲಿನ ಸರ್ಕಾರಿ‌ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅತ್ಯಂತ ಅಗತ್ಯವಾಗಿದೆ. ಯೋಜನೆ ಆರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಕೇಳಲಾಗಿದ್ದು, ಅನುಮತಿ ಸಿಕ್ಕ ತಕ್ಷಣ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಹೇಳಿದರು.

ಅಧಿಕಾರಿಗಳಿಂದ ಶಾಲಾ ದತ್ತು
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಚಿತ‌ಪಡಿಸಿಕೊಳ್ಳಲು ಇಲಾಖೆಯ ನಿರ್ದೇಶಕ ಮಟ್ಟದ ಅಧಿಕಾರಿಗಳೂ ಸೇರಿದಂತೆ ಪ್ರತಿಯೊಬ್ಬರೂ ಶಾಲಾ ದತ್ತು ತೆಗೆದುಕೊಳ್ಳಲು ಮುಂದಾಗಬೇಕು. ಅವಶ್ಯಕತೆ ಬಿದ್ದರೆ ದತ್ತು‌ ಪಡೆದ ಶಾಲೆಗಳಲ್ಲಿ ಅಧಿಕಾರಿಗಳು ಮಕ್ಕಳಿಗೆ ಬೋಧಿಸುವ ಕೆಲಸದಲ್ಲಿಯೂ ತೊಡಗಿಸಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಶೀಘ್ರದಲ್ಲಿ ಎಲ್ಲ ಶಾಲೆಗಳು ಆರಂಭ
ರಾಜ್ಯದಲ್ಲಿ ಎಲ್ಲ ಶಾಲೆಗಳನ್ನು ಆರಂಭಿಸಲು ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ‌ ಸಲಹಾ ಸಮಿತಿಯ ಸಮ್ಮತಿ ಅಗತ್ಯವಿದೆ. ಶೀಘ್ರದಲ್ಲಿ ಸಭೆ‌ ಸೇರಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದೆಂದರು. ಇದೇ ಏಪ್ರಿಲ್‌ ಎರಡರಿಂದ ತಾವು ರಾಜ್ಯಾದ್ಯಂತ ಪ್ರವಾಸ‌ ಕೈಗೊಂಡು ಎಸ್ಎಸ್ಎಲ್‌ಸಿ‌ ಹಾಗೂ ದ್ವಿತೀಯ ಪಿಯು ಪರೀಕ್ಷಾ‌ ಪೂರ್ವ ಸಿದ್ಧತೆಗಳನ್ನು ಸ್ವತಃ ಪರಿಶೀಲಿಸುವುದಾಗಿ ಸುರೇಶ್ ಕುಮಾರ್ ತಿಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು