NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕೈಸೇರಿತು ಮೈಸೂರು ಮೇಯರ್-ಉಪಮೇಯರ್ ಪಟ್ಟಕ್ಕಾಗಿ ನಡೆದ ಜೆಡಿಎಸ್‌ – ಕೈ ಮೈತ್ರಿಯ ವರದಿ

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌
Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಇತ್ತೀಚೆಗೆ ನಡೆದ ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜಾತ್ಯತೀತ ದಳದೊಂದಿಗೆ ಮೈತ್ರಿ ಮಾಡಿಕೊಂಡ ಪರಿಸ್ಥಿತಿ ಬೆಳವಣಿಗೆಗಳ ಕುರಿತಾದ ವಾಸ್ತವ ವರದಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಮತ್ತು ತನ್ವೀರ್‌ ಸೇಠ್‌ ಪ್ರತ್ಯೇಕವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.

ಪಾಲಿಕೆ ಚುನಾವಣಾ ವೀಕ್ಷಕರಾಗಿ ಇದ್ದ ಕಾರ್ಯಧ್ಯಕ್ಷ ದ್ರುವನಾರಾಯಣ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ನಡೆದ ಎಲ್ಲಾ ಬೆಳವಣಿಗೆಗಳ ವಾಸ್ತವತೆಯನ್ನು ಸಲ್ಲಿಸಿದ್ದಾರೆ. ಸುಮಾರು ನಾಲ್ಕು ಪುಟಗಳ ವರದಿ ಇದಾಗಿದೆ.

ಆ ಸಮಯದಲ್ಲಿ ಏನೇನು ಬೆಳವಣಿಗಳು ಆದವು ಎಂಬ ಬಗ್ಗೆ ವಾಸ್ತವ ಸ್ಥಿತಿ ಇದೆ ಎಂಬ ಬಗ್ಗೆ ತಿಳಿಸಿದ್ದೇವೆ. ಇದು ಪಕ್ಷದ ಆಂತರಿಕ ವರದಿ ಎಂದು ಧ್ರುವನಾರಾಯಣ್ ತಿಳಿಸಿದ್ದಾರೆ. ಇನ್ನು ತನ್ವೀರ್ ಸೇಠ್‌ ಕೂಡ 5 ಪುಟಗಳ ವರದಿಯನ್ನು ಡಿಕೆ ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಮತ್ತು ತನ್ವೀರ್‌ ಸೇಠ ಇಬ್ಬರೂ ಸರಣಿ ಸಭೆ ನಡೆಸಿದರು ಮತ್ತು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು. ನಾವು ನಿರ್ಧಾರ ಕೈಗೊಂಡಿದ್ದೆವು. ಅವರು ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದರು. ನಾಗರಿಕ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವ ಬಿಜೆಪಿ ತಂತ್ರವನ್ನು ತಡೆಯಲು ಕಾಂಗ್ರೆಸ್ ಕಾರ್ಪೋರೇಟರ್ ಗಳು ಹಾಗೂ ಮುಖಂಡರು ಸ್ಥಳದಲ್ಲಿ ತೆಗೆದುಕೊಂಡ ನಿರ್ಧಾರ ಇದಾಗಿದ್ದರಿಂದ ಇದು ವೈಯಕ್ತಿಕವಾಗಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ