NEWSದೇಶ-ವಿದೇಶರಾಜಕೀಯ

ಕಾಂಗ್ರೆಸ್‌ ಯುವ ನಾಯಕ ರಾಹುಲ್‌ಗೆ ಚಿಕಿತ್ಸೆಯ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರಿನಲ್ಲಿ ಹೇಳಿಕೆ l ರಾಹುಲ್‌ ಗಾಂಧಿ ಸಮುದ್ರದಲ್ಲಿ ಈಜಾಡಿದರೆ ಜನ ಮತಹಾಕಲ್ಲ ಎಂದು ವ್ಯಂಗ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿಕ್ಕಮಗಳೂರು: ಕಾಂಗ್ರೆಸ್‌ನ ಯುವನಾಯಕ ರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ. ಅವರು ಕಾಲಿಟ್ಟ ಕಡೆಯೆಲ್ಲ ಕಾಂಗ್ರೆಸ್ ನೆಲಕಚ್ಚುತ್ತದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪದೇಪದೇ ಸೋಲುವುದರಿಂದ ಕಾಂಗ್ರೆಸಿಗರಿಗೆ ಭ್ರಮಣೆಯಾಗಿದೆ. ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿದಿಲ್ಲ. ಇನ್ನೂ ಈ ಘೋಷಣೆ ಆಗಿರುವ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ಹೇಳಿದರು.

ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ಕಾಂಗ್ರೆಸ್ ವಿನಾಶ ವಾಗಿದೆ. ಯಾವ ರಾಜ್ಯದಿಂದಲೂ ಕಾಂಗ್ರೆಸ್‌ಗೆ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಿದ್ದಾರೆ ಎಂದು ಕಾಲೆಳೆದರು.

ಸಂಸತ್ ಚುನಾವಣೆ ನಡೆಯುವಾಗಲೂ ದೇಶ ದೇಶಕ್ಕೆ ಓಡಿಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯುವುದು, ಹಾಡುವುದು, ನೃತ್ಯ ಮಾಡುವುದರಿಂದ ಜನರನ್ನು ಸೆಳೆದು ಮತ ಕಬಳಿಸಬಹುದು ಎಂದು ಅಂದುಕೊಂಡಿದ್ದಾರೆ ಅದು ಅವರ ಪೆದ್ದುತನ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ರಾಹುಲ್‌ ಗಾಂಧಿ ಅವರು ಸಮುದ್ರದಲ್ಲಿ ಈಜಾಡಿದ್ದರು ಆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಂಸದೆ ಶೋಭಾ ಈ ರೀತಿ ಉತ್ತರಿಸಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ