NEWSನಮ್ಮರಾಜ್ಯರಾಜಕೀಯ

ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್‌ ವಿರೋಧ: ಸದನದ ಬಾವಿಗಿಳಿದ ಶಾಸಕರು- ಸದನದಲ್ಲಿ ಕೋಲಾಹಲ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆಯುವುದರಿಂದ ಆಡಳಿತಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಯಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ ಅಭಿವೃದ್ಧಿಯ ದೃಷ್ಟಿಯಿಂದ ಇದು ಅನಿವಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದರೆ ಅಭಿವೃದ್ಧಿಯಾಗಲಿದೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆದು ಭಾರತದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಯುವ ಪದ್ಧತಿ ಅನುಷ್ಠಾನಕ್ಕೆ ಬರಲಿ. ಅನಗತ್ಯ ಖರ್ಚು ವೆಚ್ಚಗಳು ಮತ್ತು ಸಮಯದ ಉಳಿತಾಯ ಇದರಿಂದ ಸಾಧ್ಯವಾಗಿದೆ. ಜತೆಗೆ ಎಲ್ಲ ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರಗಳು ಸಂಸತ್ತಿನ ಉಭಯ ಸದನಗಳಲ್ಲಿ ರಾಜ್ಯದ ವಿಧಾನಮಂಡಲದಲ್ಲಿ ಚಿಂತನ-ಮಂಥನ ನಡೆಸಿದರೆ ಮಾತ್ರ ಒಂದು ರಾಷ್ಟ್ರ ಒಂದು ಚುನಾವಣೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಈ ನಿಯಮ ಜಾರಿಗೆ ಬಂದರೆ ಕೆಲವು ರಾಜಕೀಯ ಹೊಂದಾಣಿಕೆ ಅನಿವಾರ್ಯವಾಗುವುದು. ಲೋಕಸಭೆ-ವಿಧಾನಸಭೆಗಳ ಅವಧಿಯಲ್ಲಿ ಏರಿಳಿತಗಳು ಆಗಬಹುದು. ಇವೆಲ್ಲಾ ಪ್ರಾರಂಭಿಕ ಆಡಚರಣೆಗಳಾಗಿದ್ದು, ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೆ ತರುವುದು ದೊಡ್ಡ ಸವಾಲು ಎನ್ನುವುದರಲ್ಲಿ ಅನುಮಾನವೇ ಇಲ್ಲ. ವಿಸ್ತೃತ ಚರ್ಚೆ ಮೂಲಕ ಸಾಧಕ-ಬಾಧಕಗಳನ್ನು ತಿಳಿದರೆ ಸ್ಪಷ್ಟತೆ ಮೂಡಲಿದೆ.

ಏಕಕಾಲದಲ್ಲಿ ಚುನಾವಣೆ ನಡೆಸಬೇಕು. ಒಮ್ಮೆ ಶಾಸಕರು ಆಯ್ಕೆಯಾಗಿ ಕೆಲವರು ಅಕಾಲಿಕವಾಗಿ ಮೃತಪಟ್ಟರೆ ಆ ಸ್ಥಾನಗಳನ್ನು ತುಂಬಲು ನಡೆಯುವ ಉಪಚುನಾವಣೆ ವ್ಯವಸ್ಥೆಗೆ ನಾಂದಿ ಹಾಡಬೇಕಿದೆ. ಸ್ಥಳೀಯ ಸಮಸ್ಯೆಗಳು ಮತ್ತು ಸ್ಥಳೀಯ ಮತದಾರರ ಹಿತಕ್ಕೆ ಯಾವುದೇ ಧಕ್ಕೆಯಾಗದಂತೆ ಚುನಾವಣೆ ನಡೆಸುವುದು ಮುಖ್ಯ. ಆಡಳಿತ ಸುಧಾರಣೆಯ ದಿಕ್ಕಿನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದರು

ಹಣ ಬಲದ ಮೇಲೆ ಚುನಾವಣೆ-ದುರದೃಷ್ಟಕರ
ಚುನಾವಣೆ ಯಶಸ್ಸು ಹಣ ಬಲದ ಮೇಲೆ ನಿಂತಿರುವುದು ದುರದೃಷ್ಟಕರ ಎಂದು ಹೇಳಿದ ಯಡಿಯೂರಪ್ಪ ವ್ಯಕ್ತಿ, ವ್ಯಕ್ತಿತ್ವ, ಚರಿತ್ರೆ ಹಾಗೂ ಅಭ್ಯರ್ಥಿಗಳ ವರ್ಚಸ್ಸು ಮತ್ತು ವಿಶ್ವಾಸವನ್ನು ಅವಲಂಬಿತ ಚುನಾವಣೆಗಳೂ ನಡೆಯುವುದರಿಂದ ಪಕ್ಷ ಅಭ್ಯರ್ಥಿ ಹಾಗೂ ಮತದಾರರ ಮೇಲೆ ಸಕಾರಾತ್ಮಕ ಪರಿಣಾಮ ಬೀರೆ ದೇಶದಲ್ಲಿ ಮಹತ್ವದ ಬದಲಾವಣೆ ತರಲಿದೆ. ಆಳವಾದ ಅಧ್ಯಯನ ಮತ್ತು ಸಮಾಲೋಚನೆ ಸವಿಸ್ತಾರವಾದ ಚರ್ಚೆ ನಡೆಯಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ನಮಗೆ ಚುನಾವಣೆಯಲ್ಲಿ ಏಕರೂಪ ವ್ಯವಸ್ಥೆ ಜಾರಿಗೆ ತರುವುದು ಕಷ್ಟವೇನಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಿಧಾನಮಂಡಲ ನಿರ್ಣಯ ಕೈಗೊಂಡು ಜಾರಿಗೆ ಮುಂದಾಗಬೇಕಿದೆ ಎಂದು ಸಿಎಂ ತಿಳಿಸಿದರು.

ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ
ಒಂದು ದೇಶ ಒಂದು ಚುನಾವಣೆ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಚರ್ಚೆಯ ಪ್ರತಿಯನ್ನು ಹರಿದುಹಾಕಿ ಬಾವಿಗಿಳಿದು ಧರಣಿ ನಡೆಸಿದರು. ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭಗೊಂಡಿದೆ. ವಿಧಾನಮಂಡಲ ಕಲಾಪದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಒಂದು ದೇಶ ಒಂದು ಚುನಾವಣೆ ವಿಷಯವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದರು. ಸಿದ್ದರಾಮಯ್ಯ ಮಾತನಾಡಿ ಈ ವೇಳೆ ಇದರ ಚರ್ಚೆಗೆ ನಮ್ಮ ಒಪ್ಪಿಗೆ ಇಲ್ಲ ಇದು ಆರ್‌ಎಸ್‌ಎಸ್‌ ಅಜೆಂಡವಾಗಿದೆ . ಯಾವುದೇ ಕಾರಣಕ್ಕೂ ಈ ಚರ್ಚೆಗೆ ಸಮ್ಮತಿಸುವುದಿಲ್ಲ ಎಂದು ಪಟ್ಟುಹಿಡಿದರು.

ಈ ನಡುವೆ ಸದನದಲ್ಲಿ ಗದಲ ಕೋಲಾಹಲ ಹೆಚ್ಚಾದ್ದರಿಂದ 15 ನಿಮಿಷಗಳ ಕಾಲ ಕಲಾಪವನ್ನು ಸ್ಪೀಕರ್ ಮುಂದೂಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...