NEWSಕೃಷಿನಮ್ಮರಾಜ್ಯರಾಜಕೀಯ

ರೈತರ ಪರ ಕಾಳಜಿ: ಸಂಭಾವನೆ ಪಡೆಯದೆ ಕೃಷಿ ರಾಯಭಾರಿಯಾದ ದರ್ಶನ್

ರೈತರ ಪರವಾಗಿ ಚಾಲೆಂಜಿಂಗ್ ಸ್ಟಾರ್ ಗೆ ಅಭಿನಂದನೆ ಸಲ್ಲಿಸಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಯಾವುದೇ ಸಂಭಾವನೆ ಇಲ್ಲದೆ ಕೃಷಿ ಇಲಾಖೆಯ ರಾಯಭಾರಿಯಾಗಲು ನಟ ದರ್ಶನ್ ಒಪ್ಪಿದ್ದಾರೆ. ಇದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕೃಷಿ ಕಾಯಕದ ರಾಯಬಾರಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಯ ಯೋಜನೆಗಳನ್ನು, ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು, ರೈತರಿಗೆ ಹಾಗೂ ವಿಶೇಷವಾಗಿ ಯುವಜನತೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಪದಗ್ರಹಣ ಮಾಡಿದ ದರ್ಶನ್ ಅವರನ್ನು ಇಂದು ಅಭಿನಂದಿಸಲಾಯಿತು ಎಂದು ತಿಳಿಸಿದರು.

ಇನ್ನು ಸಿನಿಮಾರಂಗದಲ್ಲಿ ಎತ್ತರಕ್ಕೆ ಬೆಳೆದಿರುವ ದರ್ಶನ್ ನಟ, ಜೊತೆಗೆ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು. ನಾನು ಕೂಡ ದರ್ಶನ್ ಅವರ ರಾಬರ್ಟ್‌ ಚಿತ್ರವನ್ನು ನೋಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ಇದು ಕೃಷಿ ಇಲಾಖೆ ಅಭೂತಪೂರ್ವ ಕಾರ್ಯಕ್ರಮ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ, ಪಶುಸಂಗೋಪನೆ ಚಟುವಟಿಕೆಗಳಲ್ಲೂ ತೊಡಗಿಕೊಂಡಿದ್ದಾರೆ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿ ಇರುವುದು ಹೆಮ್ಮೆಯ ವಿಷಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ರೈತ ನಾಯಕರಾಗಿ ರೈತಪರ ಹೋರಾಟ ಮಾಡಿ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ವಿಚಾರ.

ದರ್ಶನ್ ಎಷ್ಟು ಎತ್ತರವಾಗಿದ್ದಾರೋ ಅವರ ಹೃದಯವು ಅಷ್ಟೇ ವಿಶಾಲವಾಗಿದೆ. ದರ್ಶನ್ಗೆ ರೈತಪರ ಕಾಳಜಿ ಇದೆ. ದರ್ಶನ್ ಅವರ ಫಾರ್ಮ್ ಎನ್ನುವುದು ಒಂದು ಸಣ್ಣ ಝೂ ಇದ್ದಂತಿದೆ. ರೈತರೊಂದಿಗಿನ ಕಾರ್ಯಕ್ರಮದಲ್ಲಿ ಒಂದು ದಿನ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಸೂಪರ್ ಸ್ಟಾರ್ ಗಳು ಸಂಭಾವನೆ ಪಡೆದು ದೊಡ್ಡ ದೊಡ್ಡ ಕಂಪನಿಯ ಕಾರ್ಯಕ್ರಮಗಳಲ್ಲಿ ರಾಯಭಾರಿ ಯಾಗುತ್ತಾರೆ. ಆದರೆ ದರ್ಶನ್ ಕೃಷಿ ಇಲಾಖೆಗೆ ಯಾವುದೇ ಸಂಭಾವನೆ ಪಡೆಯದೆ ರಾಯಭಾರಿಯಾಗಿದ್ದಾರೆ. ಇದು ಅವರಲ್ಲಿರುವ ಕೃಷಿ ಉತ್ಸಾಹ, ರೈತರ ಕಾಳಜಿಯನ್ನು ತೋರಿಸುತ್ತದೆ ಎಂದರು.

ದರ್ಶನ್ ನಟನೆಯ ರಾಬರ್ಟ್ ಚಿತ್ರ ರಿಲೀಸ್ ಕಾರ್ಯಕ್ರಮಕ್ಕೆ ಸ್ವತಃ ಸ್ಪೂರ್ತಿಯಿಂದ ಅಭಿಮಾನಿಗಳು, ಜನರು ಸೇರುವುದು ನೋಡಿದರೆ ಅವರಿಗೆ ಜನರ ಅಭಿಮಾನ ಎಷ್ಟಿದೆ ಎಂದು ತೋರುತ್ತದೆ. ನಾನು ಆಧುನಿಕ ಕೌರವನಾಗಿ ನಟನೆ ಮಾಡಿದ್ದೆ, ಆದರೆ ಪೌರಾಣಿಕವಾಗಿ ನಟನೆಯಲ್ಲಿ ದರ್ಶನ್ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11ರಂದು ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರ ಸೂಪರ್ ಡೂಪರ್ ಹಿಟ್ ಆಗಲಿ ಎಂದು ಹೇಳಿದರು.

ದರ್ಶನ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಸಿನಿಮಾರಂಗ ಅಲ್ಲಿಂದ ರಾಜಕೀಯಕ್ಕೆ ಬಂದ ಪಾಟೀಲ್ ಅವರು ಸಚಿವರಾಗಿದ್ದಾರೆ. ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳಿಗೆ ಪ್ರಚಾರ ನೀಡುತ್ತೇನೆ. ರೈತರಿಗೂ ಜನರಿಗೂ ಇರುವುದು ರಕ್ತಸಂಬಂಧ. ನಾನು ಆ ಸಂಬಂಧಕ್ಕೆ ಶ್ರಮಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಕೃಷಿ ಕೈಪಿಡಿ 2021ಬಿಡುಗಡೆ ಮಾಡಲಾಯಿತು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?