ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜಕೀಯ ಸದ್ಯದ ಪರಿಸ್ಥಿತಿಯಲ್ಲಿ ಹೇಗಾದರೂ ಮಾಡಿ ತೇಜೋವಧೆ ಮಾಡುವ ಯತ್ನ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನೇಕ ವರ್ಷಗಳ ಹೆಸರು, ಜನಪ್ರಿಯತೆಯನ್ನು ತೇಜೋವಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಲವಾದ ಕಾನೂನುಗಳನ್ನು ತರಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.
ಎಲ್ಲಾ ಕ್ಷೇತ್ರಗಳಲ್ಲಿ ಇಂಥ ಯತ್ನಗಳು ನಡೆಯುತ್ತಿವೆ. ಅದರಲ್ಲೂ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಿದೆ. ನೈಜತೆ ಇದ್ದರೆ ಯಾವುದನ್ನು ನಿಷೇಧಿಸಲು ಸಾಧ್ಯವಿಲ್ಲ. ನಾನು ಸೇರಿದಂತೆ ಯಾರದೇ ಆಗಿರಲಿ ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಜನರ ಮುಂದೆ ಖಳನಾಯಕನಾಗಿ ಮಾಡುವ ಸಂಚು ನಡೆಯುತ್ತಿದೆ ಎಂದರು.
ರಷ್ಯಾ, ದುಬೈನಿಂದ ವಿಡಿಯೋ ಅಪ್ಲೋಡ್ ಮಾಡಲಾಗುತ್ತಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ನಾವು ಅಷ್ಟೇ ಅಲ್ಲ ಇಂದು 6ಜನ ನ್ಯಾಯಾಲಯಕ್ಕೆ ಹೋಗುತ್ತಾರೆ. ಮಾಧ್ಯಮಗಳ ಮೂಲಕ ತೇಜೋವಧೆ ಮಾಡಿಸುತ್ತಿದ್ದಾರೆ. ಯಾವುದೇ ವಿಚಾರ ಬಂದಾಗ ಪರಮರ್ಷಿಸಿ 24 ಗಂಟೆನೂ ಹಾಕಿ. ಸತ್ಯವಂತರಿಗೆ ಭಯ ಇಲ್ಲ. ಆದರೆ ಷಡ್ಯಂತರ ಮಾಡುವ ಜನರಿಗೆ ಭಯಪಡ ಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಮೊದಲ ದಿನ ಸಂತ್ರಸ್ತೆ ಎಂದು ಹೇಳಿದ್ದಾರೆ. ಆದರೆ ಅವಳು ಇಲ್ಲಿಯವರೆಗೆ ಯಾಕೆ ಮುಂದೆ ಬಂದಿಲ್ಲ. ಆಕೆಯ ಕುಟುಂಬ ಕೂಡ ಮುಂದೆ ಬಂದಿಲ್ಲ. ಅವಳು ಯಾರು ಏನು ಎಂಬುದು ಗೊತ್ತಿಲ್ಲ. ಯಾಕೆ ಗುರಿ ಮಾಡ್ತಾ ಇದ್ದಾರೆ ಅನ್ನೋದು ಗೊತ್ತಿಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ ತಪ್ಪು ನಾವು ಮಾಡುವುದಿಲ್ಲ ಎಂದರು.