NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸುಳ್ಳು ಸಿಎಂ ಬಿಎಸ್‌ವೈ ಅವರ ಮನೆ ದೇವರು : ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ

ಮೈತ್ರಿ ಸರ್ಕಾರ ಬೀಳಿಸಿ, ಪಕ್ಷ ದ್ರೋಹ ಮಾಡಿದವರ ಮೇಲೆ ಅನುಕಂಪ ಬರಲು ಸಾಧ್ಯವೇ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸುಳ್ಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ದೇವರು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಸಾವಿರ ಕೋಟಿ ರೂ. ಆವರ್ತ ನಿಧಿ ನೀಡುತ್ತೇವೆ ಎಂದರು, ಅದನ್ನು ಕೊಟ್ಟಿಲ್ಲ. ಮಾತಿನಲ್ಲಿ ಹೇಳಲು ಚೆನ್ನಾಗಿರುತ್ತದೆ. ಆದರೆ ಕಾರ್ಯ ರೂಪಕ್ಕೆ ತರಲು ಯಡಿಯೂರಪ್ಪ ಅವರಿಂದ ಆಗಲ್ಲ. ಅವರ ಮಾತುಗಳನ್ನು ನಂಬಿ ಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಈ ಸರಕಾರದಿಂದ ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವಂತಿಲ್ಲ. ಹೊಸ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ. ಹಾಲಿ ಇರುವ ಯೋಜನೆಗಳನ್ನೇ ಉಳಿಸಿಕೊಳ್ಳಲು ಸಹ ಹಣ ಇಲ್ಲ. ಹಣಕಾಸಿನ ಪರಿಸ್ಥಿತಿ ಸರಿಇಲ್ಲ. ಇನ್ನು ಜನಪರ ಬಜೆಟ್ ಕೊಡಲು ಇವರಿಂದ ಸಾಧ್ಯ ಆಗುತ್ತಾ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಯಾವ ಅಂಶಗಳು ಕಾರ್ಯಗತವಾಗಿಲ್ಲ. ಸಾಲ ಮನ್ನಾ ಮಾಡುತ್ತೇವೆ ಅಂದರು ಅದನ್ನು ಮಾಡಲಿಲ್ಲ ಎಂದು ಹೇಳಿದರು.

ಇನ್ನು ಮೈತ್ರಿ ಸರ್ಕಾರವನ್ನು ಬೀಳಿಸಿ ಹೋದವರ ಮೇಲೆ ಮತ್ತು ಪಕ್ಷ ದ್ರೋಹ ಮಾಡಿದವರ ಮೇಲೆ ಅನುಕಂಪ ಬರಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ರಮೇಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಬೇಕೆಂದು ಕೋರಿ ಆರು ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಅವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ ಎಂದರೆ ಅವರಿಗೆ ತಮ್ಮ ವಿರುದ್ಧ ಸಿಡಿ ಇದೆ ಎಂಬುದು ಗೊತ್ತಿರಬೇಕಲ್ಲ ಎಂದು ಪ್ರಶ್ನಿಸಿದರು. ಈ ವಿಚಾರವಾಗಿ ಸರಿಯಾಗಿ ಮಾಹಿತಿ ಪಡೆದು ಬಳಿಕ ಮಾತನಾಡುತ್ತೇನೆ ಎಂದರು.

ಜನರು ಹೇಸಿಗೆ ಪಡುವಂತಹ ಸ್ಥಿತಿಗೆ ರಾಜಕಾರಣ ಬಂದಿದೆ. ಯಾರೋ ಮಾಡಿದ ತಪ್ಪಿಗೆ ಎಲ್ಲ ರಾಜಕಾರಣಿಗಳನ್ನು ಅನುಮಾನದಿಂದ ನೋಡುವಂತಾಗಿದೆ. ರಾಜಕಾರಣಿಗಳೆಂದರೆ ಹೀಗೆ ಎಂದು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ