CrimeNEWSನಮ್ಮಜಿಲ್ಲೆನಮ್ಮರಾಜ್ಯ

ತೆಂಗಿನಕಾಯಿ ಒಡೆದುಕೊಡಿ ಎಂದಿದ್ದಕ್ಕೆ ಮಚ್ಚಿನಿಂದ ಭಕ್ತನ ಮೇಲೆ ಹಲ್ಲೆ ಮಾಡಿದ ಪೂಜಾರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿತ್ರದುರ್ಗ: ದೇವರಿಗೆ ತೆಂಗಿನಕಾಯಿ ಒಡೆದು ಕೊಡು ಎಂದು ಕೇಳಿದ ಅದೇ ಗ್ರಾಮದ ವ್ಯಕ್ತಿಗೆ ದೇವಸ್ಥಾನದ ಪೂಜಾರಿ ತೆಂಗಿನಕಾಯಿ ಒಡೆಯುವ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹಬ್ಬಿನಹೊಳೆ ವ್ಯಾಪ್ತಿಯಲ್ಲಿ ಬರುವ ಟಿ.ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಗ್ರಾಮದ ಎಲ್ಲಮ್ಮ ದೇವಿಯ ಜಾತ್ರೆ ಕಳೆದ ಎರಡು ಮೂರು ದಿನಗಳಿಂದ ನಡೆದಿದೆ ಭಾನುವಾರ ಕೊನೆಯ ದಿನವಾಗಿದ್ದು, ದೇವಿಯು ಗ್ರಾಮಗಳಿಗೆ ಬರುವ ಸಂಪ್ರದಾಯವಿದೆ. ಇದೇ ಸಮಯದಲ್ಲಿ ಗ್ರಾಮಸ್ಥರು ದೇವಸ್ಥಾನಕ್ಕೆ ಹೋಗಿ ಹಣ್ಣು-ಕಾಯಿಯೊಂದಿಗೆ ಪೂಜೆ ಮಾಡಿಸಿಕೊಂಡು ಬರುವುದು ಪದ್ಧತಿ ಇದೆ. ಅದರಂತೆ ಅದೇ ಗ್ರಾಮದ ಶೇಖರ್ ಎಂಬುವರು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಕೊಡಿ ಎಂದು ಪೂಜಾರಿ ಭರತ್ ಕೇಳಿದ್ದಾರೆ.

ಆದರೆ ಪೂಜಾರಿ ಭರತ್ ಭಕ್ತನನ್ನು ಹಿಂದೆ ಸರಿಯುವಂತೆ ಹೇಳಿದ್ದಾನೆ. ಶೇಖರ್ ಇನ್ನೊಮ್ಮೆ ಪೂಜೆ ಮಾಡಿ ಕೊಡಿಕೊಡಿ ಎಂದು ಕೇಳಿದ್ದಕ್ಕೆ ಪೂಜೆಮಾಡಿ ಕೊಡುವ ಬದಲು ಕೈಯಲ್ಲಿದ್ದ ಮಚ್ಚಿನಿಂದ ಏಕಾಏಕಿ ತಲೆಗೆ ಹಲ್ಲೇ ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಶೇಖರ್‌ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣ ಸಂಬಂಧ ಹಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಹಳೆ ವೈಷಮ್ಯ ಕಾರಣವೆಂದು ಸಾರ್ವಜನಿಕ ವಲಯದಲ್ಲಿ ಮಾತು ಕೇಳಿ ಬಂದಿದ್ದು, ಸದ್ಯಕ್ಕೆ ದೇವಸ್ಥಾನದ ಬಾಗಿಲು ಹಾಕಲಾಗಿದೆ. ದೇವಾಲಯದ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಆದರೆ ಹಲ್ಲೆ ಮಾಡಿರುವ ಪೂಜಾರಿಯನ್ನು ಬಂಧಿಸಿರುವ ಬಗ್ಗೆ ಇನ್ನು ಖಚಿತ ಮಾಹಿತಿ ತಿಳಿದು ಬಂದಿಲ್ಲ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ