ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ, ಮಾಜಿ ಮಂತ್ರಿಗಳ ರಾಸಲೀಲೆಗೆ ಸಂಬಂಧಿಸಿದ ಸಿಡಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ತಮ್ಮ ದೂರನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ.
ದೂರು ದಾಖಲಿಸಿದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಯೂಟರ್ನ್ ತೆಗೆದುಕೊಂಡಿದ್ದು, ದಾಖಲಿಸಿದ್ದ ದೂರನ್ನು ಹಿಂಪಡೆಯಲು ನಿರ್ಧರಿಸಿದ್ದು, ತಮ್ಮ ಕಿಲ್ಲರ ಮೂಲಕ ಪತ್ರವನ್ನು ಪೊಲೀಸ್ ಠಾಣೆಗೆ ತಲುಪಿಸಿದ್ದಾರೆ. ಆದರೆ ಪೊಲೀಸರು ದೂರುದಾರರೇ ಬಂದು ವಾಪಸ್ ಪಡೆಯಬೇಕು ಎಂದು ಹೇಳಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹಿಳೆಯರ ಸೆಕ್ಸ್ ವೀಡಿಯೋ ಸಿಡಿ ಹೊರಬರುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು ಈ ಹಿನ್ನೆಲೆಯಲ್ಲಿಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ಈ ಎಲ್ಲ ಬೆಳವಣಿಗಗಳ ನಡುವೆ ಇದೀಗ ಕಲ್ಲಹಳ್ಳಿ ತಮ್ಮ ದೂರನ್ನು ವಾಪಸ್ ಪಡೆಯಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ದೂರುದಾರರನ್ನು ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ದಿನೇಶ್ ತಮ್ಮ ವಕೀಲರ ಮುಂದೆ ನೋವು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ವಕೀಲರ ಮೂಲಕ ಇಂದು ಸಂಜೆ ದೂರನ್ನು ವಾಪಸ್ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ವಿಚಾರಣೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನೂ ದಾಖಲಿಸಿದ್ದರು. ಆ ವಿಡಿಯೋ ಸಂಚಲನ ಸೃಷ್ಟಿಸಿ ಮಂತ್ರಿ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು. ಈ ವೇಳೆ ಇನ್ನೂ ಮೂವರ ವಿಡಿಯೋಗಳು ತಮ್ಮ ಬಳಿ ಇರುವುದಾಗಿ ಹೇಳಿದ್ದರು.
ಸದ್ಯದ ತಮ್ಮ ಲೆಟರ್ಹೆಡ್ ನಲ್ಲಿಯೇ ಪತ್ರ ಬರೆದಿದ್ದಾರೆ. ಪತ್ರವನ್ನು ದಿನೇಶ್ ವಕೀಲರು ಪೊಲೀಸರಿಗೆ ತಲುಪಿಸಿದ್ದಾರೆ. ಆದರೆ ದಿನೇಶ್ ಲಂಚ ಪಡೆದಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ನಡುವೆ ಪೊಲೀಸ್ ವಿಚಾರಣೆಗೆ ಹಾಜರಾಗದಂತೆ ಜೀವ ಬೆದರಿಕೆ ಕರೆಗಳು ಬಂದಿದ್ದರ ಬಗ್ಗೆ ಕಲ್ಲಹಳ್ಳಿ ಹೇಳಿದ್ದರು.