ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆಯುವ ಬಗ್ಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರ ಪತ್ರಿಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ನಿಮ್ಮ ದೂರು ಆಧರಿಸಿ ಈಗಾಗಲೇ ಹಗಲಿರುಳೆನ್ನದೇ ಮಾಹಿತಿ ಸಂಗ್ರಹಿಸಿದ್ದೇವೆ. ಈಗ ಎಫ್‌ಐಆರ್ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಯುವತಿಯನ್ನೂ ಪತ್ತೆಮಾಡಿದ್ದು, ಆಕೆಯ ಹೇಳಿಕೆ ಪಡೆಯುವುದು ಬಾಕಿ ಇದೆ ಎಂದೂ ಪೊಲೀಸರು ತಿಳಿಸಿರುವುದಾಗಿ ತಿಳಿದುಬಂದಿದೆ.
ದಿನೇಶ್ ಕಲ್ಲಹಳ್ಳಿ ಪರವಾಗಿ ಅವರ ವಕೀಲರು ಠಾಣೆಗೆ ಬಂದು ಪತ್ರ ನೀಡಿದ್ದಾರೆ. ಅದನ್ನು ಪೊಲೀಸರು ಸ್ವೀಕರಿಸಿದ್ದು, ಮೌಖಿಕವಾಗಿ ಉತ್ತರಿಸಿ ಕಳುಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.