NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

2023-24 ರಲ್ಲಿ ರಾಜಸ್ವ ಕೊರತೆಯು 46,831 ಕೋಟಿ ರೂ. ಆಗಲಿದೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: 2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ 30,743 ಕೋಟಿ ರೂ. ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು. 2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.

FRBM ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು GDP ಯ 3% ಗಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ ಎಂದು ತಿಳಿಸಿದರು.

ಬಜೆಟ್‍ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿ ರೂ.ಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ ಎಂದರು.

2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು. ನಂತರದ ಪರಿಷ್ಕೃತ ಬಜೆಟ್‌ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವ ಕೊರತೆ ಎಂದೂ ಆಗಿಲ್ಲ ಎಂದು ಹೇಳಿದರು.

ರಾಜ್ಯಕ್ಕೆ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ.

ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ.

ಮುಖ್ಯಮಂತ್ರಿ ಬಿಎಸ್‌ವೈ ಅವರು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್‍ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್‌ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ ಎಂದು ಆತಂಕ ವ್ಯಕ್ತಪಡಿಸಿದರು.

ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ರೂ. ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದರು.

ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ರೂ. ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದರು.

2020-21 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ 26,930 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್‍ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ ಎಂದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ