NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಸಾರಿಗೆ ನೌಕರರ ಸಮಸ್ಯೆ ಪರಿಹಾರ ತಂತ್ರಾಂಶ ಬಿಡುಗಡೆ: ನಂದೀಶ್‌ ರೆಡ್ಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪಾರದರ್ಶಕ ವೇದಿಕೆಯಾಗಿ ಸಿಬ್ಬಂದಿ ಕುಂದುಕೊರತೆ ಪರಿಹಾರ (Employee grievance redressal) ತಂತ್ರಾಂಶ ಕಾರ್ಯನಿರ್ವಹಿಸಲಿದೆ ಎಂದು ಸಂಸ್ಥೆಯ ಅಧ್ಯಕ್ಷ ನಂದೀಶ್‌ ರೆಡ್ಡಿ ಹೇಳಿದರು.

ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಿರುವ ಸಿಬ್ಬಂದಿ ಕುಂದುಕೊರತೆ ಪರಿಹಾರ ತಂತ್ರಾಂಶವನ್ನು ಸೋಮವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.

ಈ ತಂತ್ರಾಂಶದ ಕೆಲವು ಪ್ರಮುಖ ಲಕ್ಷಣಗಳೆಂದರೆ ತಂತ್ರಾಂಶವು ಕಾಗದರಹಿತ ಮತ್ತು ಬಳಕೆದಾರರ ಸ್ನೇಹಿಯಾಗಿದೆ. ನೌಕರರು ಬಳಕೆದಾರರ ಹೆಸರು ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಮಾಡಬಹುದು.

ಸಿಬ್ಬಂದಿಗಳು ಕೊರತೆಯ ಪ್ರಕಾರಗಳನ್ನು ಆಯ್ಕೆಮಾಡಿ ಸಮಸ್ಯೆಯ ವಿವರದೊಂದಿಗೆ ಮೇಲಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.

ಪ್ರತಿ ನೋಂದಾಯಿತ ಕುಂದುಕೊರತೆಗಳ ವಿಶಿಷ್ಟ ಸ್ವೀಕೃತಿ ಸಂಖ್ಯೆಯನ್ನು ರಚಿಸಲಾಗುತ್ತದೆ ಮತ್ತು ನೌಕರರ ಲಾಗಿನ್ ನಲ್ಲಿ ಲಭ್ಯವಿರುವ ವರದಿಗಳಲ್ಲಿ ಸ್ಥಿತಿಯನ್ನು ವೀಕ್ಷಿಸಬಹುದು.

ನಿಗದಿತ ಸಮಯದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಯದಿದ್ದರೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲು ವಿಳಂಬವಾದಲ್ಲಿ ಕುಂದುಕೊರತೆಗಳನ್ನು ಸಂಬಂಧಪಟ್ಟ ಉನ್ನತ ಪ್ರಾಧಿಕಾರಕ್ಕೆ ಸ್ವಯಂಚಾಲಿತವಾಗಿ ಮುಂದಿಡಲಾಗುವುದು.

Leave a Reply

error: Content is protected !!
LATEST
KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ