NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸರ್ಕಾರದ ನಡೆ ವಿರುದ್ಧ ಮಾ.13ರಂದು  ಶಿವಮೊಗ್ಗ ಚಲೋ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿ ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಮಾ.13ರಂದು ಶಿವಮೊಗ್ಗ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ನಿನ್ನೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ನಾಯಕರು ಶಾಂತಿ ಭಂಗದ ಹೇಳಿಕೆ ನೀಡಿದ್ದರೂ ಸರ್ಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡು ಕೊರೊನಾ ಸಮಯದಲ್ಲಿ ಸರಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದರು. ಅದನ್ನು ಬಯಲು ಮಾಡಿದ್ದರು ಕ್ರಮ ಕೈಗೊಳ್ಳಲಿಲ್ಲ ಎಂದರು.

ಬಿಜೆಪಿ ಸರ್ಕಾರದ ಈ ನಡೆಯ ವಿರುದ್ಧ ಪ್ರತಿಭಟನೆಗೆ ನಾವು ನಿರ್ಧರಿಸಿದ್ದೇವೆ. ಈ ಬಗ್ಗೆ ಸದನದಲ್ಲಿ ಹಾಗೂ ಇತರ ಕಡೆಗಳಲ್ಲಿ ಚರ್ಚೆ ಮಾಡಿದ್ದೇವೆ. ಪಕ್ಷದ ಶಾಸಕ ಸಂಗಮೇಶ್ವರ್‌ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಅವರನ್ನು ಬಿಜೆಪಿಗೆ ಸೆಳೆಯಲು ಒತ್ತಡ ಹೇರಿದ್ದರು. ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್‌ಐಆರ್‌ ಹಾಕಿಸಿ ತೊಂದರೆ ನೀಡುತ್ತಿದ್ದಾರೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರು ಅವಕಾಶ ನೀಡಲಿಲ್ಲ. ಆಗ ನೋವಿನಿಂದ ತಮ್ಮ ಅಂಗಿ ಬಿಚ್ಚಿ ಮೈ ಮೇಲೆ ಆಗಿರುವ ಗಾಯ ತೋರಿಸಲು ಮುಂದಾದಾಗ ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ವಿಧಾನಸಭೆಯ ಕಲಾಪದಿಂದ ಒಂದು ವಾರ ಕಾಲ ಹೊರಗಿಡಲಾಗಿದೆ. ಆ ಮೂಲಕ ಅವರಿಗೆ ತೊಂದರೆ ನೀಡಲಾಗಿದೆ ಎಂದು ದೂರಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ