CrimeNEWSದೇಶ-ವಿದೇಶರಾಜಕೀಯ

ದೀದಿ ಮೇಲಿನ ದಾಳಿಗೆ ಪಕ್ಷಾತೀತವಾಗಿ ಖಂಡನೆ: ಕಠಿಣ ಕ್ರಮಕ್ಕೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತ್ತಾ: ನಂದಿಗ್ರಾಮದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದ್ದು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾನರ್ಜಿ ಅವರ ಎಡಗಾಲಿಗೆ ನೋವಾಗಿದ್ದು ಪ್ಲಾಸ್ಟರ್ ಹಾಕಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಮತಾ ಬ್ಯಾನರ್ಜಿಯವರಿಗೆ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿ ಬ್ಯಾನರ್ಜಿಯವರಿಗೆ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿ ಎಸ್ಎಸ್ ಕೆಇಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಮಮತಾ ಬ್ಯಾನರ್ಜಿಅವರು ಎದೆನೋವು ಮತ್ತು ಉಸಿರಾಟದ ತೊಂದರೆ ಯಾಗುತ್ತಿದೆ ಎಂದು ವೈದ್ಯರಿಗೆ ತಿಳಿಸಿರುವುದರಿಂದ ಆರೋಗ್ಯ ಕುರಿತು ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ಜಿ ಅವರು ಎಡಗಾಲಿನಲ್ಲಿಸಣ್ಣ ಪ್ರಮಾಣದ ನೋವು ಕಾಣಿಸಿಕೊಂಡಿದ್ದು, ಪ್ಲಾಸ್ಟರ್ ಹಾಕಲಾಗಿದೆ. ಅದೇ ರೀತಿ ಬಲಭುಜ, ಕುತ್ತಿಗೆ ಭಾಗ ಮತ್ತು ಎದೆನೋವು ಕಾಣಿಸಿಕೊಂಡಿರುವ ಕಾರಣ ಮುಂದಿನ 48 ಗಂಟೆಗಳು ನಿರ್ವಹಿಸಲಾಗುವುದು ಎಂದು ಐಪಿ ಜಿಎಂಆರ್ ಮತ್ತು ಎಸ್ ಎಸ್ ಕೆ ಇಎಂ ವೈದ್ಯರಾದ ಡಾ.ಎಂ. ಬಂದೋಪಾಧ್ಯಾಯ ಮಾಹಿತಿ ನೀಡಿದ್ದಾರೆ

ದೀದಿ ಅವರ ಆರೋಗ್ಯ ಕುರಿತು 48ಗಂಟೆಗಳು ಐಸಿಯುನಲ್ಲಿ ಗಮನಿಸಿ ಇನ್ನುಳಿದ ಕೆಲವು ಆರೋಗ್ಯ ತಪಾಸಣೆಗಳನ್ನು ನಡೆಸಿ ಮುಂದಿನ ಚಿಕಿತ್ಸೆ ಕುರಿತು ನಿರ್ಧಾರ ಮಾಡಲಾಗುವುದು ಎಂದು ವೈದ್ಯರ ತಂಡದ ಸದಸ್ಯರೊಬ್ಬರು ಸ್ಥಳೀಯ ಮಾಧ್ಯಮಕ್ಕೆ ವಿವರಿಸಿದ್ದಾರೆ.

ಘಟನೆ ವಿವರಿಸಿದ ದೀದಿ
ನಾನು ಕಾರಿನಲ್ಲಿ ಸ್ಥಳೀಯ ದೇವಾಲಯಕ್ಕೆ ತೆರಳಿದೆ. ಆ ವೇಳೆ ಬಂದ ಅಪರಿಚಿರ ಗುಂಪು ಕಾರನ್ನು ಓಪನ್ ಮಾಡಿದ ತಕ್ಷಣ ಕೆಲವರು ಕಾರ್‌ ಡೋರ್‌ಅನ್ನು ಬಲವಂತವಾಗಿ ಹಾಕಿದರು ಇದರಿಂದ ನನ್ನ ಎಡಗಾಲಿಗೆ ನೋವಾಯಿತು. ಅಲ್ಲದೆ ನೋಕಾಡಿದ್ದರಿಂದ ನನಗೆ ನೋವಾಗಿದೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಆಸ್ಪತ್ರೆ ಸೇರುತ್ತಿದ್ದಂತೆ ಪಶ್ಚಿಮಬಂಗಾಳದ ಪೊಲೀಸ್ ಮಹಾನಿರ್ದೇಶಕರಾದ ಪಿ ನೀರಾಜ್ನಾಯನ್‌ ಮಿಡ್ನಾಪುರ ಪೊಲೀಸ್ ಠಾಣೆ ಹಿರಿಯ ಅಧಿಕಾರಿಯಿಂದ ಘಟನೆ ವಿವರ ಕೇಳಿದ್ದಾರೆ. ಘಟನೆಗೆ ಭದ್ರತಾ ವೈಫಲ್ಯ ಕಾರಣ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಈ ನಡುವೆ ದೀದಿ ಅವರ ಮೇಲೆ ನಡೆದ ದಾಳಿಯನ್ನು ಪಕ್ಷಾತೀತವಾಗಿ ಹಲವು ಮುಖಂಡರು ಖಂಡಿಸಿದ್ದಾರೆ. ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌, ಕಾಂಗ್ರೆಸ್‌ ನಾಯಕರು, ತಮಿಳುನಾಡಿನ ರಾಜಕಾರಣಿಗಳು ಈ ದಾಳಿಯನ್ನು ಖಂಡಿಸಿದ್ದು, ದಾಳಿಕೊರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ದೀದಿ ಬಹುಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬರಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ