NEWSಕೃಷಿದೇಶ-ವಿದೇಶರಾಜಕೀಯ

ಇಂದಿನಿಂದ ಪಶ್ಚಿಮಬಂಗಾಳದಲ್ಲಿ ಕೃಷಿ ಕಾಯ್ದೆ ವಿರುದ್ಧ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಚುನಾವಣೆ ಸಮೀಪಿಸುತ್ತಿರುವ ಪಶ್ಚಿಮಬಂಗಾಳದಲ್ಲಿ ಅಭಿಯಾನ ನಡೆಸಲು ಮುಂದಾಗಿದ್ದಾರೆ.

ಕೃಷಿ ಕಾಯ್ದೆಗಳ ಪರ ಮಾತನಾಡುವವರನ್ನು ಸೋಲಿಸಿ ಎಂದು ಕರೆ ನೀಡಲು ಪಶ್ಚಿಮಬಂಗಾಳದಲ್ಲಿ ಅಭಿಯಾನ ನಡೆಸಲಿದ್ದಾರೆ. ಅಭಿಯಾನಕ್ಕೆ ಸಂಬಂಧಿಸಿದ ವೇಳಾಪಟ್ಟಿ ಬಿಡುಗಡೆ ಮಾಡಿದೆ. ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್, ಬಲ್ಬೀರ್ ಸಿಂಗ್‌, ರಾಜೃವಾಲ್‌, ಗರ್ನಾಮ್‌ ಸಿಂಗ್ ಚಾದುನಿ ಹಾಗೂ ಯೋಗೇಂದ್ರ ಯಾದವ್ ಅವರು ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ.

ಈ ನಾಯಕರು ಕೋಲ್ಕತ್ತಾ, ನಂದಿಗ್ರಾಮ ಮತ್ತು ಸಿಂಗೂರಿನಲ್ಲಿ ಸಾರ್ವಜನಿಕ ರ‍್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದಿನಿಂದ ಆರಂಭವಾಗಲಿರುವ ಅಭಿಯಾನ ಮೂರು ದಿನಗಳಕಾಲ ನಡೆಯಲಿದೆ.

ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಪಶ್ಚಿಮಬಂಗಾಳದಲ್ಲಿ ಮಾತ್ರವಲ್ಲದೆ ತಮಿಳುನಾಡಿನಲ್ಲಿಯೂ ಅಭಿಯಾನ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಂಬರ್ 26ರಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜತೆ 11 ಸುತ್ತಿನ ಮಾತುಕತೆ ನಡೆದಿದ್ದು, ಅವೆಲ್ಲವೂ ವಿಫಲವಾಗಿವೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ