NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಭೂಮಾಫಿಯಾ ನಿಯಂತ್ರಿಸಲಾಗುತ್ತಿಲ್ಲ ಎಂಬ ಕಂದಾಯ ಸಚಿವರ ಹೇಳಿಕೆ: ನೀವೇ ಬೆಳೆಸಿದ ಬಾಲಬಡುಕರಲ್ಲವೇ ಎಂದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಭೂಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ ಎಂದು ಕಿಡಿಕಾರಿದ್ದಾರೆ.

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು ಎಂದು ಟ್ವೀಟ್‌ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ