NEWSನಮ್ಮಜಿಲ್ಲೆಸಂಸ್ಕೃತಿ

ವೈಧ್ಯನಾಥೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ವೈಧ್ಯನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಇಂದು ಸಂಭ್ರಮದಿಂದ ನಡೆಯಿತು.

ಪಟ್ಟಣದ ಒಳಕೋಟೆಯಲ್ಲಿರುವ ಶ್ರೀ ವೈಧ್ಯನಾಥೇಶ್ವರ ದೇವಾಲಯದಲ್ಲಿ 3-4 ದಿನಗಳಿಂದ ವಿಶೇಷ ಪೂಜೆ ಹೋಮ ಹವನಾದಿಗಳು ನಡೆದಿದ್ದು. ರಾತ್ರಿ ಗಿರಿಜಾ ಕಲ್ಯಾಣೋತ್ಸವ ನೆರವೇರಿತು. ಶುಕ್ರವಾರ ಬೆಳಗ್ಗೆ 10.30ರಿಂದ 12.15 ಗಂಟೆಯೊಳಗೆ ಸಲ್ಲುವ ವೃಷಭ ಲಗ್ನದಲ್ಲಿ ಶ್ರೀ ವೈಧ್ಯನಾಥೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಬಣೆಯಿಂದ ನೆರವೇರಿತು.

ಹೂಗಳಿಂದ ಅಂಲಕೃತಗೊಂಡ ರಥದಲ್ಲಿ ಪಾರ್ವತಿ ದೇವಿ ಹಾಗೂ ಈಶ್ವರರ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆಯಾಕಾರದಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ರಥದಲ್ಲಿ ದೇವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನೆರೆದಿದ್ದ ಸಾವಿರಾರು ಭಕ್ತರು ಭಕ್ತಿಪರವಶತೆಯಿಂದ ತೇರನ್ನು ಎಳೆದರು.

ಅನ್ನಸಂತರ್ಪಣೆ:
ಜಾತ್ರಾ ಮಹೋತ್ಸವದ ಅಂಗವಾಗಿ ಬಂದಿದ್ದ ಭಕ್ತರಿಗೆ ಅನ್ನಸಂತರ್ಪಣೆಯನ್ನು ನೆರವೇರಿಸಿದರೆ, ಸ್ಥಳೀಯ ಹಲವಾರು ಸಂಘಟನೆಗಳು ಭಕ್ತರಿಗೆ ಮಜ್ಜಿಗೆ, ಪಾನಕ, ಹೆಸರುಬೇಳೆ ಮತ್ತು ಕಡಲೆಬೇಳೆಯನ್ನು ವಿತರಣೆ ಮಾಡಿ ಭಕ್ತಿಭಾವ ಮೆರೆದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ