NEWSನಮ್ಮಜಿಲ್ಲೆರಾಜಕೀಯ

ಮಾ.15ರಂದು ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಜೆಡಿಎಸ್‌ ಧರಣಿ: ಎಚ್‌ಡಿಆರ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾಸನ: ಎಚ್‌.ಡಿ. ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಕೈಗೊಂಡ ಕಾರ್ಯಗಳನ್ನು ರಾಜ್ಯ ಆಡಳಿತದ ಬಿಜೆಪಿ ಸರ್ಕಾರ ತಡೆ ಹಿಡಿದಿದ್ದು, ಅದನ್ನು ಖಂಡಿಸಿ ಸೋಮವಾರದಿಂದ ವಿಧಾನಸಭೆಯಲ್ಲಿ ಧರಣಿ ನಡೆಸಲಿದ್ದೇವೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಹಾಸನ ಜಿಲ್ಲೆ ಸೇರಿದಂತೆ ನಮ್ಮ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ತಾರತಮ್ಯ ನೀತಿಯನ್ನು ಖಂಡಿಸಿ ನಮ್ಮ ಪಕ್ಷದ ಎಲ್ಲ ಶಾಸಕರು ಅಧಿವೇಶನದಲ್ಲಿ ಧರಣಿ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಅವು ಇನ್ನೂ ಪ್ರಾರಂಭವಾಗಿಲ್ಲ ಮತ್ತು ಅದಕ್ಕೆ ಬೇಕಾದ ಹಣವನ್ನು ಬಿಡುಗಡೆ ಮಾಡಿಲ್ಲ. ಟೆಂಡರ್ ಪ್ರಕ್ರಿಯೆ ಕೂಡ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ ಶಾಸಕರ ಕ್ಷೇತ್ರಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ. ಸರಿಯಾಗಿ ಹಣ ಬಿಡುಗಡೆ ಮಾಡದೆ. ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಆಗುತ್ತಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ