ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಭಾರಿ ಕುತೂಹಲವನ್ನು ಮೂಡಿಸಿರುವ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣದ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೂ ಏಪ್ರಿಲ್ 17ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ಪ್ರಕಟಿಸಿದೆ.
ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು ಕೊರೊನಾದಿಂದ ಅಕಾಲಿಕ ಮರಣಕ್ಕೆ ತುತ್ತಾದ್ದರಿಂದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಬೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿರುವುದರಿಂದ ಉಪಚುನಾವಣೆ ನಡೆಯುತ್ತಿದೆ.
ಜೆಡಿಎಸ್ ಶಾಸಕ ಎಂಸಿ ಮನಗೂಳಿ ನಿಧನದಿಂದ ತೆರವಾಗಿದ್ದ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ.