NEWSಸಂಸ್ಕೃತಿ

ವಿಜೃಂಭಣೆಯಿಂದ ನೆರವೇರಿದ ಶ್ರೀ ಕನ್ನಂಬಾಡಿ ಅಮ್ಮನವರ ಬ್ರಹ್ಮ ರಥೋತ್ಸವ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ :ಇತಿಹಾಸ ಪ್ರಸಿದ್ದ ಪಿರಿಯಾಪಟ್ಟಣ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕನ್ನಂಬಾಡಿ ಅಮ್ಮನವರ ಜಾತ್ರಾ ಹಾಗೂ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.

ಬೆಳಗ್ಗೆಯಿಂದಲೇ ದೇವಾಲಯದಲ್ಲಿ ದೇವರಿಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದಿದ್ದು, 10 ಗಂಟೆಯಿಂದಲೇ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಅಮ್ಮನವರಿಗೆ ಕಳಸಾರೋಹಣವನ್ನು ನೆರವೇರಿಸಲಾಯಿತು.

ತದನಂತರದಲ್ಲಿ ದೇವಿಗೆ ಬಲಿಪೂಜೆ ನಡೆಯಿತು. ಇದಾದ ನಂತರ ಕನ್ನಂಬಾಡಿ ಅಮ್ಮನವರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಿ ನಂತರ ಕೊಂಬು ಕಹಳೆ ಬ್ಯಾಂಡ್ ಸಟ್, ಮಂಗಳವಾದ್ಯಗಳ ಸಮೇತ ಬಗೆಬಗೆಯ  ಹೂವಿನಿಂದ ಸಿಂಗಾರಗೊಂಡ ರಥಕ್ಕೆ ದೇವಿಯನ್ನು ಕೂರಿಸಿ ಭಕ್ತಾದಿಗಳ ಘೋಷಣೆಯ ನಡುವೆ ಮದ್ಯಾಹ್ನ 12.10 ರೊಳಗೆ ಸಲ್ಲುವ ವೃಷಭ ಲಗ್ನದಲ್ಲಿ ರಥೋತ್ಸವ ಜರುಗಿತು.

ದೇವಸ್ಥಾನದಿಂದ ಬಿ.ಎಂ.ರಸ್ತೆ ವರೆಗೆ ರಥವನ್ನು ಎಳೆಯುವ ಹಾಗೂ ರಥಕ್ಕೆ ಹಣ್ಣು ದವನ ಎಸೆಯುವ ಮೂಲಕ ಭಕ್ತಾದಿಗಳು ದೇವರಿಗೆ ಭಕ್ತಿ ಸಮರ್ಪಿಸಿದರು.

ಜಾತ್ರಾ ಮಹೋತ್ಸವಕ್ಕೆ ಪಿರಿಯಾಪಟ್ಟಣ ತಾಲೂಕಿನ ನೂರಾರು ಗ್ರಾಮಗಳ ಜನತೆ ಸೇರಿದಂತೆ ಮೈಸೂರು ಹಾಗೂ ಕೊಡಗು ಜಿಲ್ಲೆಯ ಸಾವಿರಾರು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ರಥೋತ್ಸವದ ನಿಮಿತ್ತ ಪಟ್ಟಣದ ಬಿ.ಎಂ. ರಸ್ತೆಯ ಎರಡೂ ಬದಿಗಳಲ್ಲಿ ಹಲವು ಸಂಘ ಸಂಸ್ಥೆಗಳು ಬೆಳಗ್ಗಿನಿಂದಲೇ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗಾಗಿ ಬಾತು, ಮೊಸರನ್ನ, ಪಾನಕ, ಮಜ್ಜಿಗೆ, ನೀರು, ಹಣ್ಣುಗಳು ಸೇರಿದಂತೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿದ್ದು ವಿಶೇಷವಾಗಿತ್ತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...