NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ನಂಜನಗೂಡು ನಂಜುಂಡೇಶ್ವರ ಸ್ವಾಮಿ ಮಹಾರಥೋತ್ಸವ ರದ್ದು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನಂಜನಗೂಡು: ಮಾರ್ಚ್‌ 26ರಂದು ನಡೆಯಬೇಕಿದ್ದ ಶ್ರೀ ನಂಜುಂಡೇಶ್ವರ ಸ್ವಾಮಿ ಪಂಚ ಮಹಾರಥೋತ್ಸವವನ್ನು ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ರಥೋತ್ಸವ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶದಲ್ಲಿ ತಿಳಿಸಿದ್ದು, ಭಕ್ತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮಾರ್ಚ್‌ 19ರಿಂದ 30ರವರೆಗೆ ದೇವಾಲಯದಲ್ಲಿ ನಡೆಯುವ ಸಂಪ್ರದಾಯಬದ್ಧ ಧಾರ್ಮಿಕ ಕಾರ್ಯಗಳು ದೇವಾಲಯದ ಒಳಗೆ ನಡೆಸಬಹುದು. 26ರಂದು ಸಾಂಕೇತಿಕವಾಗಿ ಚಿಕ್ಕ ತೇರಿನಲ್ಲಿ ಉತ್ಸವ ನಡೆಸಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷವು ಕೊರೊನಾದಿಂದ ಪಂಚ ಮಹಾರಥೋತ್ಸವವನ್ನು ರದ್ದುಗೊಳಿಸಿದ್ದರಿಂದ ಸಾಂಕೇತಿಕವಾಗಿ ಚಿಕ್ಕ ತೇರಿನಲ್ಲಿ ಉತ್ಸವ ನಡೆಸಲಾಗಿತ್ತು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ