NEWSನಮ್ಮರಾಜ್ಯರಾಜಕೀಯ

ಸಿಎಂ ಯಡಿಯೂರಪ್ಪ ಹಿಂದುಳಿದ ಜಾತಿಗಳ ವಿರೋಧಿ : ಸಿದ್ದರಾಮಯ್ಯ ಆರೋಪ

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರವರ್ಗ-2ಎ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಪ್ರತಿಭಟನೆ ನಡೆಸುತ್ತಿದೆ.

ನಗರದ ಮೌರ್ಯ ವೃತ್ತದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಹಿಂದುಳಿದ ವರ್ಗಗಳ ಸುಮಾರು 16 ಅಭಿವೃದ್ಧಿ ನಿಗಮಗಳ ಪೈಕಿ ಬಹುತೇಕ ನಾನೇ ಮಾಡಿದ್ದೇನೆ.

ಬಿಎಸ್‌ವೈ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರಿಗೆ ಎರಡು ನಿಗಮ ಮಾಡಿದರು. ಅದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಈ ಎರಡೂ ನಿಗಮಗಳಿಗೆ ತಲಾ 500 ಕೋಟಿ ರೂ. ಕೊಟ್ಟಿದ್ದಾರೆ. 16 ನಿಗಮಗಳಿಗೆ ಕೇವಲ 500 ಕೋಟಿ ರೂ. ಕೊಟ್ಟಿದ್ದಾರೆ ಇದು ಸರಿಯೇ ಎಂದು ಹೇಳಿದರು.

ಹಿಂದುಳಿದ ನಿಗಮಗಳ ಜನಸಂಖ್ಯೆ ಶೇಕಡ 70 ರಷ್ಟು. ಆದರೆ ಕಡಿಮೆ ಅನುದಾನ ನೀಡಿದ್ದು ನ್ಯಾಯವಾ ಎಂದು ಕೇಳಿದರೆ ಯಡಿಯೂರಪ್ಪ ಉತ್ತರ ಕೊಡಲೇ ಇಲ್ಲ. ಯಡಿಯೂರಪ್ಪ ಹಿಂದುಳಿದ ಜಾತಿಗಳ ವಿರೋಧಿ ಎಂದು ದೂರಿದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ, ವಿದ್ಯಾರ್ಥಿಸಿರಿ ಯೋಜನೆಗೆ ಅನುದಾನ ಕೊಟ್ಟಿಲ್ಲ, ಜಾತಿ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡುತ್ತಿಲ್ಲ. ಈ ವರದಿ ಬಿಡುಗಡೆಯಾದರೆ ಯಾವ ಜಾತಿಯವರ ವಸ್ತುಸ್ಥಿತಿ ಏನಾಗಿದೆ ಎಂಬುದು ಗೊತ್ತಾಗುತ್ತದೆ ಎಂದರು.

ಈ ರಾಜಕಾರಣಿಗಳು ಮತ್ತು ರಾಜಕೀಯದಲ್ಲಿ ಸಮಪಾಲು-ಸಮಬಾಳು ಎಂಬುದು ಕೇವಲ ಭಾಷಣಕ್ಕೆ ಸೀಮಿತವಾಗಿದೆ ಎಂದು ಟೀಕಿಸಿದರು.

ಒಕ್ಕೂಟದ ಅಧ್ಯಕ್ಷ ಕೆ.ಎನ್. ರಾಮಚಂದ್ರಪ್ಪ ಮಾತನಾಡಿ, ಆರ್ಥಿಕವಾಗಿ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮುಂದುವರಿದಿರುವ ಸಮುದಾಯಗಳನ್ನು 2ಎಗೆ ಸೇರಿಸಬಾರದು. ಸೇರ್ಪಡೆಗೊಳಿಸಿದ್ದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...