Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯಸಿನಿಪಥ

ಚಿತ್ರಮಂದಿರಗಳು ಫುಲ್‌ ಭರ್ತಿ: ಆದರೆ ಮುಂಜಾಗ್ರತೆ ಪಾಲಿಸಿ ಎಂದ ಸಿಎಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿ ಸುದ್ದಿ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಹೆಚ್ಚಳ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈಗ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ಮಾಡಿಕೊಡುವುದಾಗಿ ಹೇಳಿತ್ತು. ಇದು ಸ್ಯಾಂಡಲ್ ವುಡ್ ಸ್ಟಾರ್ ನಟರ ಆಕ್ರೋಶಕ್ಕೆ ಕಾರಣವಾಗಿತ್ತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ ಒಂದು ವರ್ಷದಿಂದ ಚಿತ್ರಮಂದಿರಗಳನ್ನು ಲಾಕ್ ಮಾಡಲಾಗಿತ್ತು. ಈಗ ತಾನೆ ಚಿತ್ರಮಂದಿರಗಳತ್ತ ಪ್ರೇಕ್ಷಕರು ಬರುತ್ತಿದ್ದಾರೆ. ಆದರೆ ಈ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ಸೀಮಿತ ಆಸನಕ್ಕೆ ಮತ್ತೆ ಅವಕಾಶ ನೀಡಿದರೆ ಚಲನಚಿತ್ರ ನಿರ್ಮಾಪಕರು, ನಟರು ಮತ್ತು ಕಾರ್ಮಿಕರು ತೊಂದರೆಗೆ ಸಿಲುಕುತ್ತಾರೆ. ಹೀಗಾಗಿ ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಆಸನಗಳ ಭರ್ತಿ ಎಂದು ಸರ್ಕಾರ ಆದೇಶ ಹೊರಡಿಸಬಾರದು ಎಂದು ಸ್ಯಾಂಡಲ್ ವುಡ್ ನಟರಾದ ಪುನೀತ್ ರಾಜ್‌ಕುಮಾರ್, ದುನಿಯಾ ವಿಜಯ್ ಮತ್ತು ಸುದೀಪ್ ಸೇರಿದಂತೆ ಅನೇಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಕೀಯ ಪ್ರಚಾರಕ್ಕೆ ಯಾವುದೇ ನಿರ್ಬಂಧಗಳಿಲ್ಲ ಆದರೆ ಏಕೆ ಎಂದು ಖಾಸಗಿ ಮಾಧ್ಯಮಗಳಲ್ಲಿ ನಿರಂತರ ವರದಿ ಪ್ರಸಾರವಾಗಿದ್ದು ಚಿತ್ರ ಮಂದಿರಗಳಿಗೇಕೆ ಈ ನಿರ್ಬಂಧ ಎಂದು ಪ್ರಶ್ನಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನ್ ಟ್ವೀಟ್ ಮಾಡಿದ್ದು, ಶೇಕಡಾ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವುದೇ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್‌ ಮಾಲೀಕರು ಕೊರೊನಾ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತಪ್ಪದೆ ಪಾಲಿಸುವ ಮೂಲಕ ಸರ್ಕಾರದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಪ್ರಸ್ತುತ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆಯಾಗಿ ಭರ್ಜಾರಿ ಕಲೆಕ್ಷನ್ ಮಾಡುತ್ತಿದೆ. ಇನ್ನು ಸ್ಟಾರ್‌ ನಟರಾದ ಪುನೀತ್ ರಾಜ್‌ಕುಮಾರ್ ಅಭಿನಯದ ಯುವರತ್ನ ಮತ್ತು ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರಗಳು ಈಗ ಬಿಡುಗಡೆಯ ಹಾದಿಯಲ್ಲಿವೆ. ಈ ನಡುವೆ ಅರ್ಧ ಆಸನ ಭರ್ತಿ ವಿಚಾರ ಚಿತ್ರ ನಿರ್ಮಾಪಕರನ್ನು ಚಿಂತೆಗೀಡಾಗುವಂತೆ ಮಾಡಿತ್ತು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ