NEWSನಮ್ಮಜಿಲ್ಲೆ

ಗೆದ್ದಲು ಹುಳಿವಿನಂತೆ ದುಡಿದು ಕಾಂಗ್ರೆಸ್ ಎಂಬ ಹುತ್ತ ಕಟ್ಟಿದ್ದೇವೆ- ಈಗ ವಿಷ ಸರ್ಪಗಳು ಸೇರಿಕೊಂಡು ಪಕ್ಷ ನಾಶ ಮಾಡುತ್ತಿವೆ: ಪಿ.ರಾಜು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಗೆದ್ದಲು ಹುಳಿವಿನಂತೆ ದುಡಿದು ಕಾಂಗ್ರೆಸ್ ಎಂಬ ಹುತ್ತ ಕಟ್ಟಿದ್ದೇವೆ. ಈಗ ಆ ಹುತ್ತಕ್ಕೆ ವಿಷ ಸರ್ಪಗಳು ಬಂದು ಸೇರಿಕೊಂಡು ಪಕ್ಷವನ್ನು ನಾಶ ಮಾಡುತ್ತಿವೆ ಎಂದು ಕೆಪಿಸಿಸಿ ಸದಸ್ಯರೂ ಆದ ಕೆ.ಆರ್.ಪೇಟೆ ಕಾಂಗ್ರೆಸ್ ಉಸ್ತುವಾರಿ ಪಿ.ರಾಜು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜೀಜ್ ಸೇಠ್ ಬ್ಲಾಕ್ ಅಧ್ಯಕ್ಷ ಅಬ್ದುಲ್ ಖಾದರ್ ಶಾಹಿದ್, ನಗರ ಡಿಸಿಸಿ ಉಪಾಧ್ಯಕ್ಷ ಅನ್ವರ್ ಪಾಷಾ, ತಮ್ಮನ್ನು ಅಮಾನತು ಗೊಳಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. 28 ವರ್ಷದಿಂದ ಖಾಸಗಿ ಜೀವನವನ್ನೂ ಮರೆತು ಕಾಂಗ್ರೆಸ್ ಕಟ್ಟಿದ್ದಕ್ಕೆ ಅಮಾನತಿನ ಬಹುಮಾನ ಸಿಕ್ಕಿದೆ. ಇದು ನಮಗೆ ಸಿಗಬೇಕಾದ ಬಹುಮಾನವೇ ಎಂದು ನೊಂದು ನುಡಿದರು.

ಮೈಸೂರು ಮೇಯರ್ ಚುನಾವಣೆ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮನ್ನು ಅಮಾನತುಗೊಳಿಸಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಬದಲು ನಮ್ಮನ್ನು ಗುರಿಯಾಗಿಸಿಕೊಂಡು ಅಮಾನತು ಮಾಡಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ ಅವರ ಮನೆಯಲ್ಲಿಯೇ ಮೂರು ಪಕ್ಷಗಳಿವೆ. ಇಂತವರು ಯಾವ ನೈತಿಕತೆಯ ಮೇಲೆ ಅಮಾನತುಗೊಳಿಸಿದರು? ಅಹಿಂದ ಎಂದವರು ಯಾವ ನಾಯಕರನ್ನು ಬೆಳೆಯಲು ಬಿಡಲಿಲ್ಲ ಎಂದು ಕಿಡಿಕಾರಿದರು.

141 ಬೂತ್ ಅಧ್ಯಕ್ಷರ ಸಾಮೂಹಿಕ ರಾಜಿನಾಮೆ?
ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ನಿಸಾರ್ ಅಹ್ಮದ್ ಮಾತನಾಡಿ, ಮಹಾಪೌರ ಚುನಾವಣೆಯಲ್ಲಿ ವರಿಷ್ಠರ ಸೂಚನೆಯಂತೆ ನಡೆದುಕೊಂಡಿದ್ದರೂ ಅವಮಾನತುಗೊಳಿಸಿರುವುದು ಖಂಡನೀಯ. ಯಾವುದೇ ತಪ್ಪ ಮಾಡದ ಅಬ್ದುಲ್ ಖಾದರ್ ಶಾಹಿದ್ ಅಮಾನತು ಖಂಡಿಸಿ ಅಜೀಜ್ ಸೇಠ್ ಬ್ಲಾಕ್‌ನ 9 ವಾರ್ಡ್ ಅಧ್ಯಕ್ಷರು ಹಾಗೂ 141 ಬೂತ್ ಅಧ್ಯಕ್ಷರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧಾರಿಸಿದ್ದೇವೆ ಎಂದು ತಿಳಿಸಿದರು.

ಡಿಸಿಸಿ ಸದಸ್ಯ ರಹಮಾನ್ ಖಾನ್ ಮಾತನಾಡಿ, ಈಗ ಅಮಾನತುಗೊಳಿಸಿರುವವರು ಯಾರೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದವರಲ್ಲ. ತನ್ವೀರ್ ಸೇಠ್ ಮನೆ ಮುಂದೆ ನಡೆದ ಪ್ರತಿಭಟನೆಯನ್ನು ತಿಳಿಗೊಳಿಸಿದರು ಅಷ್ಟೇ. ಆದರೆ ನಿಜವಾಗಿಯೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದವರ ವಿರುದ್ಧ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಅಜೀಜ್ ಸೇಠ್ ಬ್ಲಾಗ್ ಅಧ್ಯಕ್ಷ ರಸೂಲ್, ಉಪಾಧ್ಯಕ್ಷ ಸೈಯದ್ ಎಕ್ಬಾಲ್, ಕೆಪಿಸಿಸಿ ಸದಸ್ಯ ರಾಜು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು