Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ಮಾ.20- ರಾಜ್ಯದಲ್ಲಿ ಮತ್ತೆ ಮುಂದುವರಿದ ಕೊರೊನಾ ಆರ್ಭಟ : 1,798 ಮಂದಿಗೆ ಸೋಂಕು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಶುರುವಾಗಿದ್ದು ಶನಿವಾರ 1,798 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಏಳು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಶನಿವಾರ 1,030 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,43,208ಕ್ಕೆ ಏರಿಕೆಯಾಗಿದೆ. ಇನ್ನು 12,828 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 134 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು 1,186 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ನಗರದಲ್ಲಿ 4,16,633ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ ಆರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ