NEWSನಮ್ಮಜಿಲ್ಲೆರಾಜಕೀಯ

ಸಚಿವರ ಕೆರೆ ಕಬಳಿಕೆ ಹುನ್ನಾರದ ವಿರುದ್ಧ ಎಎಪಿ ಪ್ರತಿಭಟನೆ: ಹಲವರ ಬಂಧನ

ಜುನ್ನಸಂದ್ರ ಕೆರೆ ಕಬಳಿಕೆ ವಿರುದ್ಧ ಹೋರಾಟ l ಆಮ್ ಆದ್ಮಿ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜುನ್ನಸಂದ್ರ ಕೆರೆ ಅಂಗಳದ 24 ಎಕರೆ 33 ಗುಂಟೆ ಜಮೀನನ್ನು ಕಬಳಿಸಲು ಹುನ್ನಾರ ನಡೆಸುತ್ತಿದ್ದ ಸಚಿವ ಅರವಿಂದ ಲಿಂಬಾವಳಿ ಅವರ ವಿರುದ್ಧ ಭಾನುವಾರ ಪ್ರತಿಭಟನೆಗೆ ಮುಂದಾದ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಭೂ ಮಾಫಿಯಾಗಳ ಜೊತೆ ಸೇರಿಕೊಂಡು ಹುನ್ನಾರ ನಡೆಸಿದ್ದ ಸಚಿವ ಲಿಂಬಾವಳಿ ಅವರ ಹೇಡಿತನದ ಪರಮಾವಧಿ. ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿದ್ದರು. ಆದರೆ ಸಚಿವರ ಚಿತಾವಣೆಯಿಂದ ಅನುಮತಿಯನ್ನು ರದ್ದು ಮಾಡಿ ದರ್ಪ ಮೆರೆದಿದ್ದಾರೆ. ಪೊಲೀಸರು ಸಚಿವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

ಕನ್ನಡ ಸಂಸ್ಕೃತಿ ಸಚಿವರೇ ನಿಮಗೆ ಕಿಂಚಿತ್ತಾದರೂ ಸಂಸ್ಕಾರ ಇದ್ದಿದ್ದರೆ ಈ ರೀತಿ ಪುಡಿ ರೌಡಿಗಳಂತೆ ನಡೆದುಕೊಳ್ಳುತ್ತಿರಲಿಲ್ಲ. ನೀವು ಅಕ್ರಮದಲ್ಲಿ ಭಾಗಿಯಾಗಿರುವ ಕಾರಣ ನಮ್ಮ ಮೇಲೆ ಅನೈತಿಕ ಮಾರ್ಗದಲ್ಲಿ ಕ್ರಮಕ್ಕೆ ಮುಂದಾಗಿದ್ದೀರಿ. ನೀವು ಪ್ರಾಮಾಣಿಕ ವ್ಯಕ್ತಿಯಾಗಿದಿದ್ದರೆ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿದ್ದೀರಿ. ನಿಮ್ಮ ಮತ್ತಷ್ಟು ಅಕ್ರಮಗಳನ್ನು ಆಮ್ ಆದ್ಮಿ ಪಕ್ಷ ಮುಂದಿನ ದಿನಗಳಲ್ಲಿ ಬಯಲಿಗೆ ಎಳೆಯುತ್ತದೆ ಎಂದು ಕಿಡಿಕಾರಿದರು.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...