ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮೇ1ರಂದು ನಾಲ್ಕು ಮಂದಿ ಗಣ್ಯರನ್ನು ಕೊಲೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಬೆಂಗಳೂರಿನಲ್ಲಿ ಭಾನುವಾರ ಅಭಿನಂದನಾ ಸಮಾರಂಭವನ್ನು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಆಯೋಜನೆ ಮಾಡಿದ್ದು, ಈ ಸಮಾರಂಭದಲ್ಲಿ ಮಾಜಿ ಸಚಿವರು ಮಾತನಾಡಿದರು.
ಬಿಜೆಪಿ ಶಾಸಕ ಸಿ.ಟಿ. ರವಿ, ಪತ್ರಕರ್ತ ರಂಗಣ್ಣ (ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಹಾಗೂ ತಮ್ಮನ್ನು ಕೊಲೆ ಮಾಡುವ ಪತ್ರ ಬಂದಿದೆ ಅದನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಹೇಳಿದರು. ಆದರೆ ಈ ಬಗ್ಗೆ ಹೆಚ್ಚಿನದಾಗಿ ಅವರು ಯಾವುದೇ ವಿವರಣೆ ನೀಡಲಿಲ್ಲ.
ಇನ್ನು ಇಲ್ಲಿ ಸಿ.ಟಿ.ರವಿ ಅವರನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ ನನ್ನ ಕೊಲೆ ಮಾಡಿದರೆ ಸಿ.ಟಿ. ರವಿ ಉಳಿಯುತ್ತಾರೆ. ಇಂತಹ ಸಂದರ್ಭ ಎದುರಾಗಿದೆ ಎಂದು ನಿಗೂಢವಾಗಿ ಹೇಳಿದರು. ನಾನು ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಕೊಲೆಗಾರರು ಎಲ್ಲಿ ಬೇಕಾದರೂ ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರದೆ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿದ್ದೇನೆ ಎಂದು ಲಲಿತಾ ನಾಯಕ್ ಹೇಳಿದರು.
ಬ್ರಾಹ್ಮಣ ಹುಡುಗಿಯರು ಅಂತರ್ಜಾತಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಎಚ್.ಎಂ. ರೇವಣ್ಣ ಅವರು ಕೂಡ ಬ್ರಾಹ್ಮಣ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಾರೆ. ಅವರು ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ ಎಂದರು.
ಬ್ರಾಹ್ಮಣ ಸಮುದಾಯದವರು ಹೆಣ್ಣು ಮಕ್ಕಳು ಋತುಮತಿಯಾದ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿ ಕಾಡಿಗೆ ಬಿಡುತ್ತಿದ್ದರು. ಆಗ ಅಲೆಮಾರಿ ಸಮುದಾಯ ಅವರನ್ನು ಮದುವೆ ಆಗುತ್ತಿದ್ದರು. ಈಗ ಅಂತರ್ಜಾತಿ ವಿವಾಹಗಳು ಪ್ರೀತಿ ಆಧಾರದ ಮೇಲೆ ನಡೆಯುತ್ತಿವೆ. ಪ್ರೀತಿ ಇರೋದ್ರಿಂದ ಜಾತಿ ಮೀರಿ ಮದುವೆಗಳಾಗುತ್ತಿವೆ. ಇದನ್ನು ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವೀರಪ್ಪ ಮೊಯ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ಕವಿ ಪ್ರೊಫೆಸರ್ ಸಿದ್ದಲಿಂಗಯ್ಯ ಕೆಪಿಸಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಜೀವನ ಕುರಿತು ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಾಯಿತು.
ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ
ಇತ್ತೀಚೆಗೆ ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಕಳಿಸಿರುವ ಈ ಆಘಾತಕಾರಿ ವಿಚಾರವನ್ನು ಸ್ವತಃ ಅವರೇ ಬಹಿರಂಗ ಪಡಿಸಿದ್ದಾರೆ. ಮಹಿಳಾ ಬಂಡಾಯ ಸಾಹಿತಿಯಾಗಿ, ಪತ್ರಕರ್ತೆ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ನಾಯಕ್ ದಲಿತ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರಾಗಿದ್ದಾರೆ.