NEWSನಮ್ಮಜಿಲ್ಲೆನಮ್ಮರಾಜ್ಯ

ಕೋವಿಡ್‌ ಹಿನ್ನೆಲೆ ಸಭೆ ಸಮಾರಂಭಗಳಿಗೆ ಡಿಸಿಗಳ ಅನುಮತಿ ಕಡ್ಡಾಯ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

 ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಯಾವುದೇ ಸಭೆ ಸಮಾರಂಭ ಮಾಡಬೇಕಿದ್ದರೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ.

ಇಂದು ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ನಡೆದ ಸಚಿನ ಸಂಪುಟ ಸಭೆಯಲ್ಲಿ ಕಟ್ಟುನಿಟ್ಟಿನ ನಿಯಮ ಮತ್ತು ನಿರ್ಬಂಧಗಳು ಹೊರಹೊಮ್ಮುವ ನಿರೀಕ್ಷೆ ಹುಸಿಯಾಗಿದೆ. ಈಗಾಗಲೇ ಚಾಲ್ತಿಯಲ್ಲಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮಾಡಿದ ಶಿಫಾರಸುಗಳನ್ನು ಸದ್ಯಕ್ಕೆ ಸಭೆಯಲ್ಲಿ ಕೈಬಿಡಲಾಗಿದೆ. ನಾಲ್ಕೈದು ದಿನಗಳ ಬಳಿಕ ಪರಿಸ್ಥಿತಿ ಅವಲೋಕಿಸಿ ಮುಂದೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಇನ್ನು ಗಡಿ ಜಿಲ್ಲೆಗಳಲ್ಲಿ ಅಗತ್ಯ ಎಚ್ಚರಿಕೆ ಕ್ರಮ ವಹಿಸಬೇಕು. ಜನರು ಮನೆಯಿಂದ ಹೊರಗೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗುಂಪುಗೂಡದ ರೀತಿ ಎಚ್ಚರವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಕೋವಿಡ್ ನಿಯಮಗಳ ಪಾಲನೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮಾತ್ರ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಜತೆಗೆ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳೆಂದರೆ….

ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಅನುಸರಿಸುವಂತೆ ನೋಡಿಕೊಳ್ಳಬೇಕು.

ಮೈಸೂರು- ಹುಣಸೂರು ರಸ್ತೆ ಹೊರ ವರ್ತುಲ ರಸ್ತೆ ಜಂಕ್ಷನ್‌ನಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ ಕಾಮಗಾರಿಯ 22.81 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಒಪ್ಪಿಗೆ.

ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತವು 150 ಕೋಟಿಗಳ ಬ್ಯಾಂಕ್ ಸಾಲ ಪಡೆಯಲು ರಾಜ್ಯ ಸರ್ಕಾರದ ಖಾತ್ರಿ

ಸರ್ವೋಚ್ಛ ನ್ಯಾಯಾಲಯದಲ್ಲಿ ಮೀಸಲಾತಿ ಕುರಿತು ಪ್ರಕರಣ ಬಾಕಿ ಹಿನ್ನೆಲೆಯಲ್ಲಿ, ಬಾಕಿ ಇರುವ ಸಿವಿಲ್ ಅಪೀಲ್ ಸಂಖ್ಯೆ 3123/2020ಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವನ್ನು ಪ್ರಕಟಿಸುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ಅವಶ್ಯವಿರುವ ಉಪಕರಣ, ಪೀಠೋಪಕರಣ ಮತ್ತಿತರೆ ಪರಿಕರಗಳನ್ನು ಖರೀದಿಸಲು 24.83 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

2020-21ನೇ ಸಾಲಿಗೆ ರಸಗೊಬ್ಬರ ಕಾಪು ದಾಸ್ತಾನು ಮಾಡಲು ನಿರ್ಧಾರ

ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್‌ನ ಕ್ರಿಯಾ ಯೋಜನೆ-3ರಲ್ಲಿ ಅನುಮೋದಿತವಾಗಿರುವ ಹೊಸಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆ ಯಿಂದ 250 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು 104 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ.

ಕೈದಿಗಳ ಗುರುತಿನ (ಕರ್ನಾಟಕ ತಿದ್ದುಪಡಿ) ವಿಧೇಯಕ 2021, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2021ಕ್ಕೆ ಅನುಮೋದನೆ.

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸುತ್ತಿರುವ ಹೊಸ 15 ಓಟಿ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ 39.98 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ತಿದ್ದುಪಡಿ) ವಿಧೇಯಕ, 2021ಕ್ಕೆ ಅನುಮೋದನೆ.

ರಾಜ್ಯಾದ್ಯಂತ ಸರ್ಕಾರಿ ಮಾಲೀಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ನಿಗದಿಪಡಿಸಿರುವ ದರ ಪರಿಷ್ಕರಣೆಗೆ ಒಪ್ಪಿಗೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಮತ ಕ್ಷೇತ್ರದಲ್ಲಿನ 16 ಸಾವಿರ ಹೆಕ್ಟೇರ್ ನೀರಾವರಿ ವಂಚಿತ ಪ್ರದೇಶಕ್ಕೆ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ನೀರನ್ನು ಎತ್ತಿ ನೀರಾವರಿಗೊಳಪಡಿಸುವ ಕೆರೂರ್ ಏತ ನೀರಾವರಿ ಯೋಜನೆಯ 525 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆಗೆ ಘಟನೋತ್ತರ ಅನುಮತಿ.

ದಕ್ಷಿಣ ಜಿಲ್ಲೆ ಕೊಡಯಾಲ ಬೈಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ್ ವಿಠ್ಠಲ ಕಿಣಿ ಅವರಿಗೆ 0.05 ಎಕರೆ (ಐದು ಸೆಂಟ್ಸ್) ನಿವೇಶನ ಮಂಜೂರು.

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ 2021ಕ್ಕೆ ಅನುಮೋದನೆ.

ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಆದೇಶದನ್ವಯ ರಾಜ್ಯದಲ್ಲಿ ಕಲುಷಿತಗೊಳ್ಳುತ್ತಿರುವ 17 ನದಿ ಪಾತ್ರದಲ್ಲಿ ಬರುವ ನಗರ ಪಟ್ಟಣಗಳ ಒಳಚರಂಡಿ ಕಾಮಕಾರಿಯ 400 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

ಮಂಗಳೂರು ಮಹಾನಗರ ಪಾಲಿಕೆ ಕಂಕನಾಡಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಆರ್ಥಿಕ ಮಾದರಿ ಪರಿಷ್ಕರಣೆ

ನಾರಾಯಣಪುರ ಬಲದಂಡೆ ಕಾಲುವೆ 0.00 ಕಿ.ಮೀ ರಿಂದ 95 ಕಿಮೀ ಆಧುನೀಕರಣ ಕಾಮಗಾರಿಯ 2794 ಕೋಟಿ ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.

ಕೃಷ್ಣಾ ನದಿಯಿಂದ ರಾಯಚೂರು ತಾಲೂಕಿನ 18 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 192.00 ಕೋಟಿಗಳ ಅಂದಾಜು ಮೊತ್ತಕ್ಕೆ ಘಟನೋತ್ತರ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ