CrimeNEWSನಮ್ಮರಾಜ್ಯ

ಪೊಲೀಸ್‌ ಬೀಸಿದ ಲಾಠಿಯಿಂದ ಬೈಕ್‌ ಸವಾರ ಬಿದ್ದು ಲಾರಿಗೆ ಸಿಲುಕಿ ಮೃತ: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಥಳಿತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ವಾಹನ ತಪಾಸಣೆ ಮಾಡಲು ಸಂಚಾರಿ ಪೊಲೀಸರು ಅಡ್ಡಗಟ್ಟಿದ ವೇಳೆ ಸವಾರ ಬಿದ್ದು ಹಿಂದಿನಿಂದ ಬರುತ್ತಿದ್ದ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿರುವ ಘಟನೆ ನಿನ್ನೆ ಸಂಜೆ ಮೈಸೂರಿನಲ್ಲಿ ನಡೆದಿದೆ.

ವಾಹನ ತಪಾಷಣೆ ಬೈಕ್‌ ಅಡ್ಡಗಟ್ಟಿದ್ದಾರೆ. ಆ ವೇಳೆ ನಿಲ್ಲಿಸದ ಬೈಕ್‌ ಸವಾರನಿಗೆ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಸವಾರ ಕೆಳಗೆ ಬಿದ್ದಿದ್ದರಿಂದ ಹಿಂಬದಿಯಿಂದ ಲಾರಿ ಹರಿದು ಸ್ಥಳದಲ್ಲೇ ಅಸುನೀಗಿರುವುದು ನಗರದ ಹಿನಕಲ್‌ ರಿಂಗ್‌ ರಸ್ತೆಯಲ್ಲಿ ನಡೆದಿದೆ.

ಮೈಸೂರು ವಿವಿ ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಎಚ್‌.ಡಿ.ಕೋಟೆ ತಾಲೂಕಿನ ಕನ್ನಬೇನಹಳ್ಳಿ ನಿವಾಸಿ ಸಿವಿಲ್‌ ಇಂಜಿನಿಯರ್‌ ದೇವರಾಜು (46) ಮೃತಪಟ್ಟವರು.

ಇವರ ಜೊತೆ ಇದ್ದ ಬೈಕ್‌ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಘಟನೆ ನಡೆದ ಬೆನ್ನಿಗೇ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹವನ್ನು ಬ್ಯಾರಿಕೇಡ್‌ನಿಂದ ಹಾನಿಗೊಳಿಸಿ ಪಲ್ಟಿ ಹೊಡೆಸಿದ್ದಾರೆ.

ಗರುಡಾ ವಾಹನದ ಚಾಲಕ ಮಂಜುನಾಥ್‌, ವಿವಿಪುರಂ ಸಂಚಾರ ವಿಭಾಗದ ಎಎಸ್‌ಐ ಸ್ವಾಮಿನಾಯಕ್‌ ಅವರಿಗೆ ಜನರು ಥಳಿಸಿದ್ದಾರೆ.

ಮೈಸೂರಿನಲ್ಲಿ ಹೆಲ್ಮೆಟ್ ಹಾಕಿದ್ದರು ಪೊಲೀಸರು ಅಡ್ಡಗಟ್ಟುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಹೆಲ್ಮೆಟ್ ಹಾಕಿದ ದೇವರಾಜು ಅವರನ್ನು ಹಳೇ ಕೇಸಿನ ದಂಡ ವಸೂಲಿಗಾಗಿ ಪೊಲೀಸರು ಅಡ್ಡಗಟ್ಟಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ದೇವರಾಜು ಮೇಲೆ ಪೇದೆಯೊಬ್ಬರು ಲಾಠಿ ಬೀಸಿದ್ದಾರೆ. ಅದರಿಂದ ನಿಯಂತ್ರಣ ಕಳೆದುಕೊಂಡ ಸವಾರ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.  ಇಂಥ ದುರಂತ ಪರು ಕಳಿಸದಂತೆ ಸಂಬಂಧಪಟ್ಟ ಮೇಲಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ