ವಿಜಯಪಥ ಸಮಗ್ರ ಸುದ್ದಿ
ಮಧ್ಯಪ್ರದೇಶ: ಗ್ವಾಲಿಯರ್‌ನ ಪುರಾಣಿ ಚವಾನಿ ಪ್ರದೇಶದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.
ಮೃತರಲ್ಲಿ ಮಹಿಳೆಯರ ಸಂಖ್ಯೆ ಅಧಿಕವಾಗಿದ್ದು, ಈ ಅಪಘಾತದಲ್ಲಿ ಆಟೋಚಾಲಕನು ಅಸುನೀಗಿದ್ದಾನೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಓವರ್ ಲೋಡ್ ಮಾಡಿಕೊಂಡು ಜನರನ್ನು ಕರೆದೊಯ್ಯುತ್ತಿದ್ದ ಆಟೋ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿ ಒಂಬತ್ತು ಮಹಿಳೆಯರು ಆಟೋ ಚಾಲಕ ಮೃತಪಟ್ಟಿದ್ದರೆ ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಎಲ್ಲಾ ಮೃತ ಮಹಿಳೆಯರು ಅಡುಗೆ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಕೆಲಸಕ್ಕೆಂದು ಆಟೋದಲ್ಲಿ ಹೋಗುವಾಗ ಅಪಘಾತ ಸಂಭವಿಸಿ, ಈ ದುರಂತ ಅಂತ್ಯ ಕಡಿದೆ ಎಂದು ಗ್ವಾಲಿಯರ್ ಎಸ್ಪಿ ಅಮಿತ್ ಸಿಂಘ್ವಿ ಮತ್ತು ನಗರ ಪೊಲೀಸ್ ಕಮಿಷನರ್ ರವಿ ಭಂಡೋರಿಯ ತಿಳಿಸಿದ್ದಾರೆ.