ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗಳು ಸಿಕ್ಕಿದ್ದರೆ ಒಂದು ಅಂತ್ಯ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಸದಸ್ಯರು ಕುಂಟು ನೆಪ ಹೇಳಿ ಪ್ರತಿಭಟನೆ ಮಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬೇರೆ ವಿಚಾರ ಸಿಗದೇ ಇರುವುದರಿಂದ ಧರಣಿ ನಡೆಸುತ್ತಿದ್ದಾರೆ, ಇದು ಎಷ್ಟರಮಟ್ಟಿಗೆ ಸರಿ ಅಂತ ಸಿಎಂ ಪ್ರಶ್ನಿಸಿದ್ದಾರೆ. ನಿಮ್ಮೆಲ್ಲರ ಮಾತು ಕೇಳಿದ್ದೇನೆ. ಸುಸೂತ್ರವಾಗಿ ಕಲಾಪ ನಡೆಸಲು ಬಿಡಿ ಅಂತ ಕಾಂಗ್ರೆಸ್ ಸದಸ್ಯರಿಗೆ ಯಡಿಯೂರಪ್ಪ ಮನವಿ ಮಾಡಿಕೊಂಡರು.
ಆದರೂ ಕಾಂಗ್ರಸ್ ಶಾಸಕರು ಸದನದಲ್ಲಿ ಕಲಾಪ ನಡೆಸದೆ ಸಿಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಭಟನೆರ ಮಾಡುತ್ತಿದ್ದು, ಆ ಹೆಣ್ಣು ಮಗಳಿಗೂ ನ್ಯಾಯ ಕೊಡಿಸಲು ಸರ್ಕಾರ ಮುಂದಾಗಬೇಖು ಎಂದು ಆಗ್ರಹಿಸುತ್ತಿದ್ದಾರೆ.