Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶರಾಜಕೀಯ

ಬಿಜೆಪಿಯಿಂದ ಬ್ರಿಟಿಷ್‌ ಕಾಲದ ವೈಸ್‌ರಾಯ್ ಪದ್ದತಿ ಮರು ಜಾರಿಗೆ ಯತ್ನ: ಎಎಪಿ ಖಂಡನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಸಂವಿಧಾನ ಕೊಟ್ಟಿರುವ ಹಕ್ಕನ್ನು ಕೇಂದ್ರ ಸರ್ಕಾರ ಯಾವುದೇ ನಾಚಿಕೆ ಇಲ್ಲದೆ ಕಸಿದುಕೊಳ್ಳುತ್ತಿದೆ‌. ದೆಹಲಿ ಭೂಪ್ರದೇಶ(ತಿದ್ದುಪಡಿ) ಕಾಯ್ದೆ ತರುವ ಮೂಲಕ ಬ್ರಿಟಿಷರ ಕಾಲದ ವೈಸ್‌ರಾಯ್ ಪದ್ಧತಿ ಮರು ಜಾರಿಗೆ ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಕಿಡಿಕಾರಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಚುನಾಯಿತ ಸರ್ಕಾರಕ್ಕಿಂತಲೂ ಕೇಂದ್ರದ ಕೈಗೊಂಬೆಯಂತಿರುವ ಲೆಫ್ಟಿನೆಂಟ್ ಜನರಲ್​ಗೆ ಈ ಮಸೂದೆಯು ಹೆಚ್ಚು ಅಧಿಕಾರ ನೀಡುತ್ತದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಿಜೆಪಿಯು ಈ ಮೂಲಕ ದ್ವೇಷ ಸಾಧನೆಗೆ ಇಳಿದಿದೆ. ದೆಹಲಿ ನಾಗರಿಕರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ ನಮ್ಮ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದರು.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್​ ಗವರ್ನರ್ ನಡುವಣ ಜಟಾಪಟಿ ಬಗ್ಗೆ ಸುಪ್ರೀಂಕೋರ್ಟ್​ನ ಸಂವಿಧಾನ ಪೀಠ ತೀರ್ಪು ನೀಡಿದ ಮೂರು ವರ್ಷಗಳ ನಂತರ ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗಿದ್ದು. ಬಿಜೆಪಿಯ ದ್ವೇಷ ಸಾಧನೆಗೆ ಇದೊಂದು ನಿದರ್ಶನವಷ್ಟೇ. ಆಮ್ ಆದ್ಮಿ ಪಕ್ಷದ ದೇಶಭಕ್ತಿ ಮಾದರಿಗೆ ಹೆದರಿ ಕಪಟವೇಷಧಾರಿ ದೇಶಭಕ್ತ ಬಿಜೆಪಿ ಇಂತಹ ನೀಚ ಕೆಲಸಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕಾಯ್ದೆಯ ತಿದ್ದುಪಡಿಗೂ ಮೊದಲು ಭೂಮಿ, ಪೊಲೀಸ್ ವ್ಯವಸ್ಥೆ, ಸಾರ್ವಜನಿಕ ಸುವ್ಯವಸ್ಥೆ ಈ ಮೂರು ವಿಚಾರಗಳನ್ನು ಹೊರತು ಪಡಿಸಿ ಮಿಕ್ಕೆ ಯಾವ ವಿಚಾರಗಳಲ್ಲಿಯೂ ನಿರ್ಧಾರ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌ಗೆ ತಿಳಿಸಬೇಕಾದ ಅಗತ್ಯವಿರಲಿಲ್ಲ ಆದರೆ ಈ ತಿದ್ದುಪಡಿಯಿಂದ ರಾಜ್ಯ ಸರ್ಕಾರದ ಅಧಿಕಾರ ಕಿತ್ತುಕೊಳ್ಳಲಾಗಿದೆ, ಇದನ್ನು ಮತ್ತೆ ಪಡೆದೆ ತೀರುತ್ತೇವೆ ಎಂದು ಹೇಳಿದರು.

ಲೋಕಸಭೆಯಲ್ಲಿ ಸೋಮವಾರ ಅನುಮೋದನೆ ದೊರಕಿಸಿಕೊಂಡ ಈ ಮಸೂದೆ ರಾಜ್ಯಸಭೆಯಲ್ಲಿ ಮಂಡಿಸುವ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಲಿದೆ. ಆದ ಕಾರಣ ಈ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ