NEWSನಮ್ಮಜಿಲ್ಲೆರಾಜಕೀಯ

ರಮೇಶ್‌ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಗಲಾಗಬೇಕು: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು:
ರಮೇಶ್‌ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು. ಸಿ.ಡಿ ಯಲ್ಲಿದ್ದ ಯುವತಿಗೆ ಕೂಡಲೇ ರಕ್ಷಣೆ ಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣ ಮಂಗಳವಾರ ವಿಧಾನಸೌಧದಲ್ಲಿ ಭಾರಿ ಚರ್ಚೆಗೆ ಗ್ರಾಸವಾಯಿತು. ಕಾಂಗ್ರೆಸ್‌ ನಾಯಕರು ಸದನದಲ್ಲಿ ಸಿ.ಡಿ ಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಸಂತ್ರಸ್ತ ಯುವತಿ ನಾನು ರಮೇಶ್ ಜಾರಕಿಹೊಳಿ ಬಳಿ ಕೆಲಸ ಕೊಡಿಸುವಂತೆ ಕೋರಿ ಹೋಗಿದ್ದೆ, ಅವರು ನನ್ನನ್ನು ಬಳಸಿಕೊಂಡಿದ್ದಾರೆಂದು ಹೇಳಿದ್ದಾರೆ. ಹೀಗಾಗಿ, ಅದು ರೇಪ್ ಆಗುತ್ತದೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಎಸ್​ಐಟಿ ಮೇಲೆ ನಮಗೆ ನಂಬಿಕೆ ಇಲ್ಲ. ಹೈಕೋರ್ಟ್ ನಿವೃತ ನ್ಯಾಯಾಧೀಶರೊಬ್ಬರನ್ನು ನೇಮಿಸಬೇಕು. ಅದು ನಕಲಿ ಸಿ.ಡಿ ಎಂದು ಬಿಂಬಿಸಿ ಪ್ರಕರಣ ಮುಚ್ಚಿಹಾಕಲು ಸರ್ಕಾರ ಹೊರಟಿದೆ. ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದ ಮೇಲೆ ನಾವೂ ಯಾಕೆ ಅಸೆಂಬ್ಲಿಗೆ ಬರಬೇಕು? ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ನಡೆಸಿದರೆ ಆ ಹೆಣ್ಣುಮಗಳಿಗೆ ನ್ಯಾಯ ಸಿಗುತ್ತದೆ ಎಂದು ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಕೋರ್ಟ್‌ ಮೊರೆ ಹೋದ ಸಚಿವರು ರಾಜೀನಾಮೆ ನೀಡಲಿ
ರಮೇಶ್‌ ಜಾರಕಿಹೊಳಿ ಪ್ರಕರಣ ಬೇರೆ, ಎಚ್‌.ವೈ.ಮೇಟಿ ಕೇಸ್ ಬೇರೆ. ತನಿಖೆಯಾಗಬೇಕಾದರೆ ಎಫ್‌ಐಆರ್ ದಾಖಲಿಸಬೇಕಲ್ವಾ? ಎಫ್‌ಐಆರ್ ದಾಖಲಿಸದೆ ಹೇಗೆ ತನಿಖೆ ಮಾಡುತ್ತಾರೆ? ನಿರ್ಭಯಾ ಕಾಯ್ದೆ ಪ್ರಕಾರ ಎಫ್‌ಐಆರ್ ದಾಖಲಿಸಬೇಕು. ಸದನದಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ. ಕೋರ್ಟ್ ಮೊರೆ ಹೋದ 6 ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಿಡಿ ಪ್ರಕರಣ ಸದನದಲ್ಲಿ ಭಾರಿ ಸೌಂಡ್‌ ಮಾಡಿದ್ದರಿಂದ ಕಲಾಪ ನಡೆಯಲು ಅವಕಾಶ ಇಲ್ಲದಂತ್ತಾಯಿತು. ಇದರಿಂದ ಕಲಾಪವನ್ನು ಸಭಾಧ್ಯಕ್ಷರು ಬುಧವಾರ 11ಗಂಟೆ ವರೆಗೆ ಮುಂದೂಡಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ