NEWSನಮ್ಮಜಿಲ್ಲೆಸಂಸ್ಕೃತಿ

ಮಾ.25ರಂದು ರೋಟರಿ,ಇನ್ನರ್ ವ್ಹೀಲ್ ಸಂಸ್ಥೆಯಿಂದ ಹದಿನಾರು ಕೆರೆ ಸ್ವಚ್ಛತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನಂಜನಗೂಡು: ದೇಶಿ ಹಾಗೂ ವಿದೇಶಿ ಹಕ್ಕಿಗಳನ್ನು ಆಕರ್ಷಿಸುವ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಕೆರೆ ಸ್ವಚ್ಛತೆಗೆ ರೋಟರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆಯು ಮುಂದಾಗಿದ್ದು, ಮಾ.25ರಂದು ಕಾರ್ಯಕ್ರಮ ನಿಗದಿ ಮಾಡಿದೆ ಎಂದು ರೋಟರಿ ಮೈಸೂರ್ ಸೌತ್ ಈಸ್ಟ್‌ನ ಅಧ್ಯಕ್ಷ ರೋ. ರಾಜೀವ್ ತಿಳಿಸಿದ್ದಾರೆ.

ರೋಟರಿ ಮೈಸೂರು ಸೌತ್ ಈಸ್ಟ್ ಸಂಸ್ಥೆ ಹಾಗೂ ಅದರ ಅಂಗಸಂಸ್ಥೆ ಗಳಾದ ಇನ್ನರ್ ವ್ಹೀಲ್ ಕ್ಲಬ್ ಮತ್ತು ರೋಟರಾಕ್ಟ್ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಇವರು ಹದಿನಾರು ಗ್ರಾಮ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ಪಂಚಾಯಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರೌಢ ಶಾಲೆ ಹದಿನಾರು ಇವರೆಲ್ಲರ ಸಹಯೋಗದಲ್ಲಿ ಹದಿನಾರು ಕೆರೆಯ ಸುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದರೊಂದಿಗೆ ರೋಟರಿ ಮೈಸೂರು ಸೌತ್ ಈಸ್ಟ್ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡಿರುವ ಹದಿನಾರು ಗ್ರಾಮದ ರೋಟರಿ ಸಮುದಾಯ ದಳ(ಆರ್‌ಸಿಸಿ) ಸದಸ್ಯರೂ ಭಾಗವಹಿಸಲಿದ್ದಾರೆ ಎಂದು ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಹಾಗೂ ರೋಟರಿ ಸದಸ್ಯೆ ಶುಭಾ ಮುರಳೀಧರ್ ತಿಳಿಸಿದ್ದಾರೆ.

ಸ್ವಚ್ಛತಾ ಕಾರ್ಯಕ್ರಮದ ಜತೆಗೇ “ಹದಿನಾರು ಕೆರೆ”ಯಲ್ಲಿ ಪ್ರತಿವರ್ಷವೂ ಬರುವ ವಲಸೆ ಹಕ್ಕಿಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ಮೈಸೂರಿನ ಪಕ್ಷಿ ತಜ್ಞ ಡಾ. ಅಭಿಜಿತ್ ಎಪಿಸಿ ನೀಡಲಿದ್ದಾರೆ. ಗ್ರಾಮದ ಸಮುದಾಯ ಕೇಂದ್ರದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.

ತಹಸೀಲ್ದಾರ್ ಭೇಟಿ: ಹದಿನಾರು ಕೆರೆ ಪಕ್ಷಿ ವೀಕ್ಷಣೆಯ ತಾಣವಾಗಿ ರೂಪುಗೊಳಿಸಲು ಹದಿನಾರಿನ ‘”ನೇಚರ್ ಕ್ಲಬ್” ತಂಡ ಉತ್ಸುಕವಾಗಿದ್ದು, ಈ ಬಗ್ಗೆ ತಮ್ಮ ಅನಿಸಿಕೆಯನ್ನು ತಂಡದವರಾದ ಡಾ. ರವೀಂದ್ರ ಅವರು ನಂಜನಗೂಡು ತಹಸೀಲ್ದಾರ್ ಮೋಹನ ಕುಮಾರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ತಿಳಿಸಿದರು.

ಕೆರೆಯನ್ನು ವೀಕ್ಷಿಸಿದ ತಹಸೀಲ್ದಾರ್ ಮೋಹನ ಕುಮಾರಿ ಈ ಕಾಯಕ್ರಮದಲ್ಲಿ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ಸೇರಿ ಸ್ವಚ್ಛತೆಯಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...