NEWSನಮ್ಮರಾಜ್ಯರಾಜಕೀಯ

ನನಗಿರೋದು ಒಬ್ಬಳೆ ಹೆಂಡ್ತಿ, ಒಂದೇ ಸಂಸಾರ: ಸುಧಾಕರ್‌ಗೆ ತಿರುಗೇಟುಕೊಟ್ಟ ಡಿಕೆಶಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ರಾಸಲೀಲೆ ಸಿಡಿ ವಿಚಾರವೀಗ ರಾಜಕೀಯ ಮುಖಂಡರ ನಡುವಿನ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಬೇರೆಯವರು ಏನು ಏಕಪತ್ನೀವ್ರತಸ್ಥರಾ ಎಂದು ಪ್ರಶ್ನಿಸಿರುವ ಆರೋಗ್ಯ ಸಚಿವ ಸುಧಾಕರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಿಡಿ ವಿಚಾರ ಕುರಿತು ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಚಿವ ಸುಧಾಕರ್ ಯಾರಾರು ಮುಖ್ಯಮಂತ್ರಿಯಾಗಿದ್ದಾಗ ಏನೇನು ಮಾಡಿದ್ದಾರೆ ಎಂಬುದು ಹೊರಬರಲಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಶ್ರೀರಾಮಚಂದ್ರರು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಸವಾಲು ಹಾಕುತ್ತೇನೆ. 224 ಶಾಸಕರ ನೈಜ ಜೀವನದ ಬಗ್ಗೆ ತನಿಖೆ ನಡೆಸಿ ಅವರ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೋ ಇಲ್ಲವೋ ಎಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಹೇಳಿದ್ದರು.

ಸುಧಾಕರ್ ನೀಡಿರುವ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ನನಗಿರೋದು ಒಬ್ಬಳೇ ಹೆಂಡತಿ ಒಂದೇ ಸಂಸಾರ ಎಲ್ಲರ ಬಗ್ಗೆ ತನಿಖೆ ನಡೆಸಿದರೆ ಮುಕ್ತವಾಗಿ ನಡೆಸಲಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಸುಧಾಕರ್‌ ಅವರು ನುಡಿಮುತ್ತುಗಳನ್ನಾಡಿದ್ದಾರೆ. ಇದನ್ನು ಇಲ್ಲಿ ಚರ್ಚೆ ಮಾಡೋದಲ್ಲ ಸದನದಲ್ಲಿ ಚರ್ಚೆ ಮಾಡುತ್ತೇವೆ. ಇನ್ನು ಒಬ್ಬರಿಗೆ ಸಂಬಂಧಿಸಿದ್ದಲ್ಲ. ಹೀಗಾಗಿ ನಮ್ಮ ನಾಯಕರ ಜತೆಯೂ ಚರ್ಚಿಸಿ ಮುಂದಿನ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಹೇಳಿಕೆಯನ್ನು ನೈತಿಕ ದಿವಾಳಿತನ ಪ್ರದರ್ಶನ ಎಂದು ಕರ್ನಾಟಕ ಕಾಂಗ್ರೆಸ್ ಕುಹಕವಾಡಿದೆ. ಈ ಮಧ್ಯೆ ಪ್ರಕರಣದ ತನಿಖೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಸ್ತುವಾರಿಯಲ್ಲೇ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ವಿಧಾನಸಭೆಯಲ್ಲಿ ಧರಣಿ ಮುಂದುವರಿಸಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ