CrimeNEWSನಮ್ಮರಾಜ್ಯ

ರಾಸಲೀಲೆ ಪ್ರಕರಣ: ಸಂತ್ರಸ್ತ ಯುವತಿಯ ಎರಡನೇ ವಿಡಿಯೋ ಹೇಳಿಕೆ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷವಾಗಿದ್ದಾರೆ.

ಗುರುವಾರ ಸಂತ್ರಸ್ತ ಯುವತಿ ಮತ್ತೆ ಪ್ರತ್ಯಕ್ಷವಾಗಿದ್ದು, 2ನೇ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಸಂತ್ರಸ್ತ ಯುವತಿ ಎಸ್‌ಐಟಿ ಮುಂದೆ ಹಾಜರಾಗುತ್ತೇನೆ ಎಂದು ಹೇಳಿಕೆ ನೀಡಿದ್ದು, ತಂದೆ-ತಾಯಿಯ ರಕ್ಷಣೆ ನನಗೆ ಮುಖ್ಯ. ಹಾಗಾಗಿ ಪೋಷಕರಿಗೆ ರಕ್ಷಣೆ ನೀಡಬೇಕೆಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ನಮ್ಮ ಅಪ್ಪ, ಅಮ್ಮ ಸ್ವಇಚ್ಛೆಯಿಂದ ದೂರು ನೀಡಿಲ್ಲ ಅನ್ನೋದು ನನಗೆ ನೂರಕ್ಕೆ ನೂರರಷ್ಟು ಗೊತ್ತು. ಮಗಳು ತಪ್ಪು ಮಾಡಿಲ್ಲ ಅನ್ನೋದು ಪೋಷಕರಿಗೆ ಗೊತ್ತಿದೆ. ನನಗೆ ಅಪ್ಪ, ಅಮ್ಮನ ಸುರಕ್ಷತೆ ಮುಖ್ಯ. ಅವರು ಸೇಫ್ ಆಗಿದ್ದರೆ ಅನ್ನೋದು ಖಾತ್ರಿಯಾದಾಗ ಎಸ್‍ಐಟಿ ಮುಂದೆ ಬಂದು ಹೇಳಿಕೆ ದಾಖಲಿಸುತ್ತೇನೆ ಎಂದು ವಿಡಿಯೋದಲ್ಲಿ ಆ ಯುವತಿ ಹೇಳಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಗಳು ನಮ್ಮ ತಂದೆ-ತಾಯಿಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ನನಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ನಾನು ಮಾರ್ಚ್ 12 ರಂದು ವಿಡಿಯೋ ಹೇಳಿಕೆಯನ್ನು ಎಸ್‍ಐಟಿಗೆ ನೀಡಿದ್ದೆ.

ಮಾರ್ಚ್ 13ರಂದು ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸಿದ ಅರ್ಧ ಗಂಟೆಯಲ್ಲಿ ನನ್ನ ವಿಡಿಯೋ ಹೊರಗೆ ಬಿಡುತ್ತಾರೆ. ಎಸ್‍ಐಟಿ ಅಧಿಕಾರಿಗಳು ಯಾರ ಪರ ಕೆಲಸ ಮಾಡುತ್ತಿದ್ದಾರೆ ಅನ್ನೋದು ಅರ್ಥ ಆಗ್ತಿಲ್ಲ. ಅಧಿಕಾರಿಗಳು ಯಾರನ್ನು ಸೇಫ್ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಎಸ್‍ಐಟಿ ತನಿಖೆ ಬಗ್ಗೆ ಆ ಯುವತಿ ಅನುಮಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...