NEWSನಮ್ಮರಾಜ್ಯರಾಜಕೀಯ

ಸಿಎಂ ಕೆಟಿಟಿಪಿ ಕಾಯ್ದೆ ತಿದ್ದುಪಡಿ ಜಾರಿ ಮಾಡಿ ತಮ್ಮ ಪುತ್ರ ಮತ್ತು ಪಟಾಲಂಗೆ ಅನುಕೂಲ ಮಾಡಿಕೊಡುತ್ತಿದ್ದಾರೆ: ಆಮ್ ಆದ್ಮಿ ಪಾರ್ಟಿ ಆರೋಪ

ಕೆಆರ್‌ಐಡಿಎಲ್‌ ಸಂಸ್ಥೆಯ ನವ ನಗರೋತ್ಥಾನ ಯೋಜನೆಯ ಕಾಮಗಾರಿಗಳ ಅಕ್ರಮಗಳಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಜಗದೀಶ್ ವಿ.ಸದಾಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಟೆಂಡರ್ ಕರೆಯದೇ 2ಕೋಟಿ ರೂ. ಮೊತ್ತದ ವರೆಗಿನ ಕಾಮಗಾರಿಗಳನ್ನು ಕೆ.ಆರ್.ಡಿ.ಐ.ಎಲ್ ಮೂಲಕ ಅನುಷ್ಠಾನ ಮಾಡಲು ಅವಕಾಶ ನೀಡುವುದಕ್ಕಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ (ತಿದ್ದುಪಡಿ) ಕಾಯ್ದೆ (ಕೆ.ಟಿ.ಟಿ.ಪಿ ಕಾಯ್ದೆ) ಗೆ ವಿಧಾನ ಸಭೆಯಲ್ಲಿ ಅಂಗೀಕಾರ ನೀಡುವ ಮೂಲಕ ಸರಕಾರ ಹಗರಣ ಮಾಡುವ ದಾರಿಯನ್ನು ಸುಗಮಗೊಳಿಸಿದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಾಂ ಆರೋಪಿಸಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೆಂಡರ್ ಕರೆಯುವಾಗ ಮತ್ತು ಟೆಂಡರ್ ನಲ್ಲಿ ಸ್ಪರ್ಧೆ ಇರುವಂತೆ ಮಾಡಲು ಜಾರಿಗೆ ತಂದಿರುವ ಈ ಕಾಯ್ದೆಯನ್ನು ಕೆ.ಆರ್.ಡಿ.ಐ.ಎಲ್ ಗೆ 4ಜಿ ಅಡಿಯಲ್ಲಿ ವಿನಾಯಿತಿ ನೀಡುವ ಕಾರಣಕ್ಕೆ ಉಲ್ಲಂಘಿಸಿದರೆ ಇಡೀ ಕಾಯ್ದೆ ಜಾರಿ ಮಾಡಿದ ಉದ್ದೇಶ ಮಣ್ಣುಪಾಲಾಗುತ್ತದೆ. ಇದರಿಂದ ಗುತ್ತಿಗೆದಾರರಿಗೆ ಅವಕಾಶ ಇಲ್ಲದಂತಾಗುತ್ತದೆ ಎಂದು ದೂರಿದರು.

ಬೆಂಗಳೂರಿನ ಸಮಗ್ರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯ ಅಡಿಯಲ್ಲಿ 8343 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗಿದೆ. ಈ ಅನುದಾನದಲ್ಲಿ 5000 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಕಾಮಗಾರಿಗಳನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆ ಆರ್ ಐ ಡಿ ಎಲ್) ಒದಗಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಈ ಎಲ್ಲ ಕಾಮಗಾರಿಗಳ ಪ್ರಾರಂಭಿಕ ಪರಿಶೀಲನೆಯಲ್ಲಿ ಅನೇಕ ಅಕ್ರಮಗಳನ್ನು ಪತ್ತೆ ಹಚ್ಚಿದ್ದಾರೆ. ಒಂದೇ ಕಾಮಗಾರಿಗಳಿಗೆ ಬಿಬಿಎಂಪಿ ಹಾಗೂ ಕೆಆರ್‌ಐಡಿಎಲ್ ಎರಡೂ ಸಂಸ್ಥೆಗಳಿಂದ ಬಿಲ್ ಸಲ್ಲಿಸಿ ಹಣ ಪಡೆದಿರುವ ಪ್ರಕರಣಗಳನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಪತ್ತೆ ಹಚ್ಚಿದ್ದಾರೆ ಎಂದು ಹೇಳಿದರು.

ಇನ್ನು ತುರ್ತು ಕಾಮಗಾರಿಗಳ ಹೆಸರಿನಲ್ಲಿ ಅನವಶ್ಯಕ ಕಾಮಗಾರಿಗಳನ್ನು ನಡೆಸಿ ಕೋಟ್ಯಂತರ ರೂಪಾಯಿಗಳನ್ನು ಲೂಟಿ ಮಾಡಲಾಗಿದೆ. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಬಿಬಿಎಂಪಿ ಆಯುಕ್ತ ರಲ್ಲಿಯೂ ಸಹ ತಪ್ಪಿತಸ್ಥ ಅಧಿಕಾರಿಗಳನ್ನು ಕ್ರಮ ಜರುಗಿಸಬೇಕೆಂಬ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಣ್ತಪ್ಪಿಸಿ ಇಷ್ಟೊಂದು ಬೃಹತ್ ಮೊತ್ತದ ಕೋಟ್ಯಂತರ ರೂಗಳ ಹಗರಣಗಳು ಆಗಲು ಸಾಧ್ಯವೇ ಇಲ್ಲ ಎಂದರು.

ಈ ಹಗರಣದಲ್ಲಿ ಮುಖ್ಯಮಂತ್ರಿಗಳೇ ಸ್ವತಃ ತಮ್ಮ ಮಗ ವಿಜಯೇಂದ್ರ ಮತ್ತು ಅವರ ಪಟಾಲಂಗೆ ಅನುಕೂಲ ಮಾಡಿಕೊಡಲು ಈ ಕುತಂತ್ರದಲ್ಲಿ ಶಾಮೀಲಾಗಿದ್ದಾರೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಈ ಹಗರಣದಲ್ಲಿ ಬೆಂಗಳೂರಿನ ಪ್ರಮುಖ ಮಂತ್ರಿಗಳು ಶಾಸಕರ ಕೈವಾಡ ಇದ್ದೇ ಇದೆ. ಕೇವಲ ಅಧಿಕಾರಿಗಳನ್ನು ಮಾತ್ರ ಗೂಬೆ ಕೂರಿಸುವ ಪ್ರಯತ್ನವನ್ನು ಬಿಟ್ಟು ಪ್ರಬಲ ರಾಜಕಾರಣಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ಸದಾಂ ಆಗ್ರಹಿಸಿದರು.

ನವ ನಗರೋತ್ಥಾನ ಯೋಜನೆಯ ಹೆಸರಿನಲ್ಲಿ ಕೆ.ಆರ್.ಐ.ಡಿ.ಎಲ್ ಸಂಸ್ಥೆಯಿಂದ ನಡೆಸಲಾಗಿರುವ ಸಾವಿರಾರು ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಮ್ ಆದ್ಮಿ ಪಕ್ಷವು ಆಗ್ರಹಿಸುತ್ತದೆ. ಈ ಬಗ್ಗೆ ರಾಜ್ಯಪಾಲರಲ್ಲಿ ದೂರನ್ನು ಸಹ ಸಲ್ಲಿಸಲಾಗುವುದು. ಪಕ್ಷವು ಬೆಂಗಳೂರಿನ ಅಭಿವೃದ್ಧಿಯ ಹೆಸರಿನಲ್ಲಿ ನಡೆಸಲಾಗಿರುವ ಈ ಸಾವಿರಾರು ಕೋಟಿ ರೂ.ಗಳ ಬೃಹತ್ ಕಾಮಗಾರಿ ಹಗರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದು ಸುರೇಶ್ ರಾಥೋಡ್ ತಿಸಿದರು.

ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಇದ್ದರು.

 

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ